ಎಲ್ಲಿಗೆ ಪಯಣ ಚಿತ್ರೀಕರಣ ಮುಕ್ತಾಯ

ಖ್ಯಾತ ನಿರ್ದೇಶಕ ಕಾಶಿನಾಥ್ ಪುತ್ರ ಅಭಿಮನ್ಯು ನಾಯಕನಾಗಿ ನಟಿಸಿರುವ, ಕಿರಣ್ ಸೂರ್ಯ ನಿರ್ದೇಶನದ “ಎಲ್ಲಿಗೆ ಪಯಣ ಯಾವುದೋ ದಾರಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ಬೆಂಗಳೂರು, ಮಡಿಕೇರಿ, ಚಿಕ್ಕಮಗಳೂರು, ದೊಡ್ಡಬಳ್ಳಾಪುರ ಮುಂತಾದ ಕಡೆ 108 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಕಥಾಹಂದರ ಹೊಂದಿರುವ  ಚಿತ್ರಕ್ಕೆ ಕಿರಣ್ ಸೂರ್ಯ ಕಥೆ,‌ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸುದರ್ಶನ ಆರ್ಟ್ಸ್ ಲಾಂಛನದಲ್ಲಿ ಜತಿನ್ ಜಿ ಪಟೇಲ್ ಹಾಗೂ ಚೇತನ್ ಕೃಷ್ಣ  ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಎರಡು ಹಾಡಗಳಿದ್ದು, ಅನಂತ ಕಾಮತ್ ಸಂಗೀತ ನೀಡುತ್ತಿದ್ದಾರೆ. ಅದರಲ್ಲಿ ಒಂದು ಹಾಡನ್ನು ಕಿಚ್ಚ ಸುದೀಪ ಹಾಡಿದ್ದಾರೆ. ಆ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಸತ್ಯ ಛಾಯಾಗ್ರಹಣ, ಗಣೇಶ್ ನಿರ್ಚಲ್ ಸಂಕಲನ ಹಾಗೂ ವಿಶ್ವ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ.

ಅಭಿಮನ್ಯು ಅವರಿಗೆ ನಾಯಕಿಯರಾಗಿ ಸ್ಪೂರ್ತಿ ಉಡಿಮನೆ ಹಾಗೂ ವಿಜಯಶ್ರೀ ಕಲಬುರ್ಗಿ ನಟಿಸಿದ್ದಾರೆ. ಬಲ ರಾಜವಾಡಿ ಚಿತ್ರರಂಗ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.