ಎಲ್ಲ ಪಕ್ಷಗಳ ಪ್ರಣಾಳಿಕೆಯಲ್ಲಿ ಯುವಕರಿಗೆ ಆದ್ಯತೆ ನೀಡಲು ಒತ್ತಾಯ

ಕಲಬುರಗಿ,ಮಾ.27: ನಿರುದ್ಯೋಗ ಮತ್ತು ಶೈಕ್ಷಣಿಕ ನೆರವಿನ ಕೊರತೆ. ಕಲೆ, ಸಾಹಿತ್ಯ, ಸಂಸ್ಕøತಿಗೆ ಕೊಡುಗೆ ನೀಡುವುದರೊಂದಿಗೆ ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸ್ವಾವಲಂಬನೆಯನ್ನು ಜಾಗೃತಗೊಳಿಸುವುದು ಇಂದಿನ ಅಗತ್ಯವಾಗಿದೆ. ಆತ್ಮ ವಿಶ್ವಾಸ ಮತ್ತು ಸ್ವಾವಲಂಬನೆಯನ್ನು ಹೆಚ್ಚಿಸಲು, ಮುಂಬರುವ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ಕರ್ನಾಟಕ ಯುವ ಆಂದೋಲನವು ಕೇಂದ್ರೀಕರಿಸುವ ಯುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ಸಂಘಟನೆಯ ರಾಜ್ಯ ಸಲಹಾ ಸಮಿತಿ ಸದಸ್ಯ ಸಿರಾಜ್ ಶಾಹ್ ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಕರು ಮಾನವ ಸಂಪನ್ಮೂಲದ ಪ್ರಮುಖ ಆಸ್ತಿ. ರಾಜ್ಯದ 60ರಷ್ಟು ಜನಸಂಖ್ಯೆಯು ಯುವಕರನ್ನು ಒಳಗೊಂಡಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ, ಯುವಕರು ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಕಲೆ, ಸಾಮಾಜಿಕ ಮಾಧ್ಯಮ ಮತ್ತು ಕ್ರೀಡೆಗಳ ವಿವಿಧ ಕ್ಷೇತ್ರಗಳಲ್ಲಿ ಬಹಳ ಸಕ್ರಿಯರಾಗಿದ್ದಾರೆ. ಯುವಕರ ಮನಸ್ಥಿತಿ ಮತ್ತು ಆಲೋಚನಾ ಕ್ರಮವನ್ನು ಸರಿಯಾದ ರೀತಿಯಲ್ಲಿ ತರಬೇತುಗೊಳಿಸಿದರೆ, ರಾಜ್ಯವು ಉತ್ತಮ ದಿಕ್ಕಿನಲ್ಲಿ ಮುನ್ನಡೆಯಬಹುದು ಎಂದರು.
ಇಂದಿನ ಯುವಕರು, ಪುರುಷರು ಮತ್ತು ಮಹಿಳೆಯರು ಸಾಮಾಜಿಕ, ಮಾನಸಿಕ ಮತ್ತು ದೈಹಿಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅವರು ತಮ್ಮ ಜೀವನದ ಅತ್ಯುತ್ತಮ ಅವಧಿಯನ್ನು ಕೋಮು ಗಲಭೆಗಳು, ಆಂತರಿಕ ಕಲಹಗಳು, ಭ್ರμÁ್ಟಚಾರದಂತಹ ಕೆಟ್ಟ ಚಟುವಟಿಕೆಗಳಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಇಂದಿನ ಯುವಪೀಳಿಗೆಯಲ್ಲಿ ಮಾನಸಿಕ ಒತ್ತಡ, ಆತ್ಮಹತ್ಯೆಯ ಪ್ರವೃತ್ತಿ ಹೆಚ್ಚುತ್ತಿದೆ. ಇದಕ್ಕೆ ಮುಖ್ಯ ಕಾರಣ ಎಂದು ಅವರು ಹೇಳಿದರು.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸರಿ ಸುಮಾರು ಶೇಕಡಾ 50ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಕೂಡಲೇ ಭರ್ತಿ ಮಾಡಿಕೊಳ್ಳಬೇಕು. ಸರ್ಕಾರದ ವಾರ್ಷಿಕ ಬಜೆಟ್ ಹಂಚಿಕೆಯಲ್ಲಿ ಕೊಠಾರಿ ಆಯೋಗದ ಶಿಫಾರಸ್ಸಿನ ಅನ್ವಯ ಜಿಡಿಪಿಯ ಶೇಕಡಾ 6ರಷ್ಟು ಅನುದಾನವನ್ನು ಶಿಕ್ಷಣ ವಲಯಕ್ಕೆ ಕೊಡಬೇಕು ಎಂದು ಅವರು ಒತ್ತಾಯಿಸಿದರು.
ರಾಜ್ಯದ ಉನ್ನತ ಶಿಕ್ಷಣದ ವ್ಯವಸ್ಥೆಯು ತೀರಾ ಚಿಂತಾಜನಕವಾಗಿದೆ. ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಸರ್ಕಾರದ ಸರಿಯಾದ ಅನುದಾನ ಮತ್ತು ನಿರ್ವಹಣೆ ಇಲ್ಲದೇ ಅವುಗಳು ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ವಿಫಲವಾಗುತ್ತಿವೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ವಿಶ್ವವಿದ್ಯಾಲಯಗಳ ಸೂಕ್ತ ನಿರ್ವಹಣೆಗಾಗಿ ಮತ್ತು ಉನ್ನತೀಕರಣಕ್ಕಾಗಿ ವಿಶೇಷ ಗಮನ ಹರಿಸಬೇಕು ಎಂದು ಅವರು ತಿಳಿಸಿದರು.
ಎನ್‍ಇಪಿ- 2020ರಲ್ಲಿ ಪ್ರಸ್ತಾಪಿಸಿದಂತೆ ವಿದೇಶಿ ಖಾಸಗಿ ವಿಶ್ವವಿದ್ಯಾಲಯಗಳನ್ನು ಭಾರತದಲ್ಲಿ ಹೊಸದಾಗಿ ಪ್ರಾರಂಭಿಸುವುದಕ್ಕಿಂತ ಚಾಲ್ತಿಯಲ್ಲಿರುವ ವಿಶ್ವವಿದ್ಯಾಲಯಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಲು, ವಿದೇಶಿ ಪ್ರಾಧ್ಯಾಪಕರನ್ನು ವಿಶೇಷ ಅಥವಾ ಅತಿಥಿ ಉಪನ್ಯಾಸಕರನ್ನಾಗಿ ನೇಮಕ ಮಾಡಬೇಕು. ಹಾಗೂ ರಾಜ್ಯ ಮಟ್ಟದ ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡುವ ಮೂಲಕ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವಂತೆ ಅವರು ಒತ್ತಾಯಿಸಿದರು.
ರಾಜ್ಯದ ವಿವಿಧ ಹೆಸರಿನಡಿ ಅಥವಾ ನಿರ್ದಿಷ್ಟ ವಿಷಯಗಳಲ್ಲಿ ಗುಂಪು ಹಲ್ಲೆ ಮತ್ತು ನೈತಿಕ ಪೋಲಿಸ್ ಗಿರಿ ಹೆಚ್ಚುತ್ತಿದೆ. ಅಸಂವಿಧಾನಿಕ ಮಾತುಗಳ ಮೂಲಕ ದ್ವೇಷ ಭಾಷಣ ಮತ್ತು ಮತೀಯ ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕೂಡಲೇ ಅವುಗಳನ್ನು ತಡೆಯಬೇಕು ಎಂದು ಅವರು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಸೈಯದ್ ಸೈಫ್ ಮುನ್ಸುರಿ, ಜುಬೇರ್ ಖಾನ್ ಮಾನ್ವಿ ಮುಂತಾದವರು ಉಪಸ್ಥಿತರಿದ್ದರು.