ಎಲ್ಲ ವಯೋಮಾನದವರಿಗು ಲಸಿಕೆ ನೀಡಿ: ರಾಹುಲ್ ಗಾಂಧಿ ಆಗ್ರಹ

ನವದೆಹಲಿ, ಏ.7- ದೇಶದ ಎಲ್ಲಾ ವಯೋಮಾನದವರಿಗೂ ಕೋರೋನಾ‌ ಸೋಂಕಿನ ಲಸಿಕೆ ನೀಡಿ ಎಂದು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಎಲ್ಲ ವಯೋಮಾನದವರಿಗೆ ಲಸಿಕೆ ಪಡೆಯಲು ಅನುವಾಗುವಂತೆ ಕೇಂದ್ರ ಸರ್ಕಾರ ,ಮುಕ್ತ ಅವಕಾಶ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಟ್ವೀಟ್ ಮಾಡಿರುವ ಅವರು ಅಗತ್ಯ ಇರುವವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ ಎನ್ನುವ ಕೇಂದ್ರ ಸರ್ಕಾರದ ನಡೆ ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ದೇಶದ ಎಲ್ಲ ಜನರಿಗೆ ಕೊರೋನಾ ಸೋಂಕಿನ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಕೊರೊನಾ ಸೋಂಕು ತಡೆಯಲು ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವ ಜೊತೆಗೆ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ದೇಶದ ಎಲ್ಲರೂ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ,18 ವರ್ಷ ದಾಟಿದ ದೇಶದ ಎಲ್ಲ ಜನರಿಗೂ ಲಸಿಕೆ ಹಾಕಲು ಕೇಂದ್ರ ಸರ್ಕಾರ ಮುಂದಾಗಬೇಕು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಭಾರತೀಯ ವೈದ್ಯಕೀಯ ಮಂಡಳಿ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದರು.