ಎಲ್‌ಡಿಎಫ್,ಯುಡಿಎಫ್ ಗೆ ಕೇರಳದಲ್ಲಿ ಬಿಜೆಪಿ ಪರ್ಯಾಯ; ಜೋಷಿ

ತಿರುವನಂತಪುರಂ, ಏ.೬- ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಡಿಎಫ್ ಮತ್ತು ಯುಡಿಎಫ್ ಗೆ ಪರ್ಯಾಯ ರಾಜಕೀಯ ಶಕ್ತಿಯಾಗಿ ಬಿಜೆಪಿ ಗುರುತಿಸಿಕೊಳ್ಳಲಿದೆ ಕೇರಳದ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ.
ಕೇರಳದಲ್ಲಿ ಈ ಬಾರಿ ಎಲ್‌ಡಿಎಫ್, ಯುಡಿಎಫ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಎದುರಾಗಿದೆ ಎಂದು ಕೂಡ ಅವರು ಹೇಳಿದ್ದಾರೆ.
ಕೇರಳದಲ್ಲಿ ಬಿಜೆಪಿ ಪಕ್ಷ ಈ ಬಾರಿ ಗಮನಾರ್ಹ ಸಾಧನೆ ಮಾಡಲಿದೆ ಅದಕ್ಕೆ ಚುನಾವಣಾ ಪ್ರಚಾರ ಸಮಯದಲ್ಲಿ ರಾಜ್ಯದ ವಿವಿಧ ಮೂಲೆಗಳಲ್ಲಿ ಜನರಿಂದ ವ್ಯಕ್ತವಾದ ಜನಬೆಂಬಲ ಸಾಕ್ಷಿ ಎಂದು ಅವರು ತಿಳಿಸಿದ್ದಾರೆ.
ಕೇರಳದಲ್ಲಿ ಈ ಬಾರಿ ಬಿಜೆಪಿ ಪಕ್ಷ ಗಮನಾರ್ಹ ಸಾಧನೆ ಮಾಡಿದೆ ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೆಟ್ರೋ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಮಾತನಾಡಿ ತಾವು ರಾಜಕಾರಣಕ್ಕೆ ಪ್ರವೇಶಿಸಿದ ಬಳಿಕ ಕೇರಳದಲ್ಲಿ ಬಿಜೆಪಿಯ ಚಿತ್ರಣ ಬದಲಾಗಿದೆ ಎಂದು ಕೂಡ ಅವರು ತಿಳಿಸಿದ್ದಾರೆ.
ಕಣ್ಣೂರು ಜಿಲ್ಲೆಯ ಪೊನ್ನಾನಿಯಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್‌ಡಿಎಫ್ ಮತ್ತು ಯುಡಿಎಫ್ ಗೆ ಬಿಜೆಪಿ ಪರ್ಯಾಯ ವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅವರು ತಿಳಿಸಿದ್ದಾರೆ.
ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಅವರು ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿಗೆ ಜನರು ಬೆಂಬಲ ನೀಡಲಿದ್ದಾರೆ. ಹೀಗಾಗಿ ತಮ್ಮ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.