ದೇವದುರ್ಗ,ಮಾ.೩೧- ಪಟ್ಟಣ ಸೇರಿ ತಾಲೂಕಾದ್ಯಂತ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಶಾಂತಿಯುವಾಗಿ ನಡೆದಿವೆ. ಹಲವು ಕೇಂದ್ರಗಳಿಗೆ ಬಿಇಒ ಸುಖದೇವ್ ಭೇಟಿನೀಡಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿಸಿದರು.
ಪಟ್ಟಣದ ಡಾನ್‌ಬೋಸ್ಕೋ ಶಿಕ್ಷಣ ಸಂಸ್ಥೆಯಲ್ಲಿನ ಪರೀಕ್ಷಾ ಕೇಂದ್ರಕ್ಕೆ ಭೇಟಿನೀಡಿ ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ಯಾವುದೇ ಆತಂಕಬೇಡ ಎಂದು ಮಕ್ಕಳಿಗೆ ಹೇಳಿದರು. ತಾಲೂಕಿನಲ್ಲಿ ಒಟ್ಟು ೧೬ಪರೀಕ್ಷಾ ಕೇಂದ್ರ ತೆರೆಯಲಾಗಿದ್ದು ೩೭೭೧ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ೩೭೪೬ ವಿದ್ಯಾರ್ಥಿಗಳು ಪರೀಕ್ಷೆ ಹಾಜರಾದರೆ, ೨೫ವಿದ್ಯಾರ್ಥಿಗಳು ಮಾತ್ರ ಗೈರಾಗಿದ್ದರು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಪ್ರಥಮ ಭಾಷೆ ಕನ್ನಡ ಪರೀಕ್ಷೆಗೆ ಬಹುತೇಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಸಂದರ್ಭದಲ್ಲಿ ಗ್ರೇಡ್-೨ ತಹಸೀಲ್ದಾರ್ ಶ್ರೀನಿವಾಸ್ ಚಾಪೇಲ್, ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಜ ಪೂಜಾರಿ, ಅಕ್ಷರದಾಸೋಹ ಅಧಿಕಾರಿ ಬಂದೋಲಿಸಾಬ್ ಇತರರಿದ್ದರು.