ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: 37,479 ವಿದ್ಯಾರ್ಥಿಗಳು ಪಾಸ್

ಬೆಂಗಳೂರು, ಜು.20- ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವರು ಮಾಹಿತಿ ನೀಡಿದರು.
ನಾಳೆ ಮಧ್ಯಾಹ್ನ 12 ಗಂಟೆ ನಂತರ ಈ ವೆಬ್‌ಸೈಟ್‌ನಲ್ಲಿ ( https://karresults.nic.in/ ) ಫಲಿತಾಂಶ ವೀಕ್ಷಿಸಬಹುದು.
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಅವರು ತಿಳಿಸಿದರು.