ಎಸ್ಎಸ್ಎಲ್‌ಸಿ 32 ವಿದ್ಯಾರ್ಥಿಗಳಲ್ಲಿ ಸೋಂಕು

ಬೆಂಗಳೂರು,ಜು. ೨- ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.
ಎಸ್.ಎಸ್.ಎಲ್.ಸಿ. 5ನೇ ದಿನ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 32 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಎಸ್ಎಸ್ಎಲ್‌ಸಿ ಪರೀಕ್ಷೆ ಆರಂಭ ದಿನದಿಂದಲೂ ಕೆಲ ಸೋಂಕು ಉಳ್ಳ ವಿದ್ಯಾರ್ಥಿಗಳಲ್ಲಿ ಸಹ ಪರೀಕ್ಷೆ ಬರೆದು ಹೋಗಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಈಗಾಗಲೇ ಕಂಟೇನ್‌ಮೆಂಟ್ ಜೋನ್‌ನಲ್ಲಿದ್ದ 3,363 ವಿದ್ಯಾರ್ಥಿಗಳು ಮತ್ತು 613 ಕೋವಿಡ್ ಲಕ್ಷಣ ಉಳ್ಳ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಪರೀಕ್ಷೆ ಆಯೋಜಿಸಲಾಗಿತ್ತು.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು, ಕಂಟೈನ್‌ಮೆಂಟ್ ಪ್ರದೇಶ 31 ಪರೀಕ್ಷಾ ಕೇಂದ್ರಗಳನ್ನು ತೆರೆವುಗೊಳಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.