ಎಸ್ಟಿ ಎಸ್ಸಿ ಹಾಸ್ಟಲ್ ಗಳಲ್ಲಿ ಊಟಕ್ಕೆ ಸೋನಾಮಸೂರಿ ಅಕ್ಕಿ:ನಾಗೇಂದ್ರ


(ಸಂಜೆವಾಣಿ ವಾರ್ತೆ)
ಬೆಂಗಳೂರು.ಜೂ 24: ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಮಟ್ಟದ ಎಸ್.ಟಿ ಮತ್ತು  ಎಸ್.ಸಿ ವಿದ್ಯಾರ್ಥಿನಿಲಯಗಳಲ್ಲಿ ವಾಸವಿರುವ ವಿದ್ಯಾರ್ಥಿಗಳ ಅರೋಗ್ಯದ ಹಿತದೃಷ್ಟಿಯಿಂದ ಸುಮಾರು ಎರಡು ಲಕ್ಷದ ಐವತ್ತು ಸಾವಿರ ಮಕ್ಕಳ ಊಟಕ್ಕೆ  ಎಲ್ಲಾ ವಿದ್ಯಾರ್ಥಿನಿಲಯಗಳಿಗೆ ಸೋನಾಮಸೂರಿ ನೀಡುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ, ಸಚಿವ ಬಿ.ನಾಗೇಂದ್ರ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು.
ವಿಕಾಸಸೌಧದ ಸಭಾಂಗಣದಲ್ಲಿ ನಿನ್ನೆ ಸಂಜೆ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ರವರ ಅಧ್ಯಕ್ಷತೆಯಲ್ಲಿ ನಡೆದ 2023 -24 ನೇ ಸಾಲಿನ ಎಸ್.ಸಿ.ಎಸ್.ಪಿ & ಟಿ. ಎಸ್. ಪಿ ಆಯವ್ಯಯ ಹಂಚಿಕೆಯ ಬಗ್ಗೆ ನೋಡಲ್ ಏಜೆನ್ಸಿ ಸಭೆಯಲ್ಲಿ ಉಭಯ ಸಚಿವರು ವಿಶೇಷವಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ಊಟದ ವ್ಯವಸ್ಥೆಯ ಚರ್ಚೆ ಮಾಡಿದರು.
ರಾಜ್ಯದಲ್ಲಿ ಆಯಾ ವಲಯವಾರು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಊಟದ ವ್ಯವಸ್ಥೆ ಮಾಡಲಾಗಿದ್ದು ಆದರೆ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿನಿಲಯಗಳಲ್ಲಿ ಅಕ್ಕಿಯಿಂದ ಮಾಡುವ ಆಹಾರ ಪದಾರ್ಥಗಳಿಗೆ ಪ್ರಾಮುಖ್ಯತೆ ನೀಡಿದ್ದು, ಹಾಗಾಗಿ ಈ ಹಿಂದೆ ಬಳಕೆ ಮಾಡುತಿದ್ದ ಅಕ್ಕಿಗಿಂತ ಇನ್ನು ಮುಂದೆ ರಾಜ್ಯದ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಉತ್ತಮ ಗುಣಮಟ್ಟದ ಸೋನಾ ಮಸೂರಿ ಅಕ್ಕಿ ನೀಡಲು ಸಭೆಯಲ್ಲಿ  ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಉಭಯ ಸಚಿವರು ಸಲಹೆ ನೀಡಿ,  ಮುಂದಿನ ತಿಂಗಳಿಂದಲೇ ಜಾರಿಗೆ ತರುವ ವ್ಯವಸ್ಥೆ ಮಾಡಿ ಎಂದು ಹಿರಿಯ ಅಧಿಕಾರಿಗಳಿಗೆ ತಿಳಿಸಿದರು.

One attachment • Scanned by Gmail