ಎಸ್ಡಿಎಂಸಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ


ಸಂಜೆವಾಣಿ ವಾರ್ತೆ,
ಮರಿಯಮ್ಮನಹಳ್ಳಿ, ನ.24: ಪಟ್ಟಣಕ್ಕೆ ಸಮೀಪದ ಬ್ಯಾಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ನೂತನ ಎಸ್.ಡಿ.ಎಂ.ಸಿ. ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ನೂತನ ಸಮಿತಿಗೆ ಅಧ್ಯಕ್ಷರಾಗಿ ಕೆ.ರಾಮಪ್ಪ, ಉಪಾಧ್ಯಕ್ಷೆಯಾಗಿ ಬಿ.ಹುಲುಗೆಮ್ಮ ಆಯ್ಕೆಯಾದರು.
ಈ ಸಂದರ್ಭದಲ್ಲಿ ಮುಖ್ಯಗುರು ಎಂ.ವೀರೇಶ್, ಗ್ರಾ.ಪಂ.ಸದಸ್ಯ ಸಿದ್ದರಾಮಪ್ಪ, ಮುಖಂಡ ಜಿ. ಶಿವಪ್ಪ ಸೇರಿದಂತೆ ಇತರರು ಇದ್ದರು. ಗ್ರಾಮದ ಮುಖಂಡರು ನೂತನ ಸಮಿತಿಯ ಪದಾಧಿಕಾರಿಗಳಿಗೆ ಅಭಿನಂದಿಸಿದರು.