ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ, ಆ 5: ಎಸ್‍ಡಿಪಿಐ ಹಾಗೂ ಪಿಎಫ್‍ಐ ದೇಶದ್ರೋಹಿ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಅಶಾಂತಿ ನಿರ್ಮಾಣ ಮಾಡುತ್ತಿರುವುದು ಖಂಡನೀಯ. ಈ ಕೂಡಲೇ ಸರ್ಕಾರಗಳು ಎಚ್ಚೆತ್ತುಕೊಂಡು ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಘೋಷಣೆ ಕೂಗಿದರು.
ಶ್ರೀ ರಾಮ ಸೇನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ತಾಲೂಕಾಧ್ಯಕ್ಷ ಮೈಲಾರ ಗುಂಡಪ್ಪನವರ, ವಿಶ್ವಾಸ ನಾಗಶೆಟ್ಟಿ, ಚಿದಾನಂದ ಕಲಾಲ, ಸುರೇಶ್ ಶಿಂದೆ, ಆನಂದ, ಮಲ್ಲಿಕಾರ್ಜುನ ಸೇರಿದಂತೆ ಹಲವರು ಇದ್ದರು.