ಎಸ್‌ಯುಸಿಐ ಅಭ್ಯರ್ಥಿ ಕಲಾವತಿ ಪರ ಪ್ರಚಾರ

ವಿಜಯಪುರ, ಏ. ೧೬ -ಚಿಕ್ಕಬಳ್ಳಾಪುರಕ್ಕೆ ಕುಡಿಯುವ ನೀರು ಹಾಗೂ ಶ್ರಮ ಆಧಾರಿತ ಕಾರ್ಖಾನೆಗಳಿಗಾಗಿ ಜನ ಹೋರಾಟ ಬಲಪಡಿಸಲು ದುಡಿಯುವ ಜನರ ಹೋರಾಟದ ಧ್ವನಿ ಎಸ್.ಯು.ಸಿ.ಐ (ಸಿ) ಪಕ್ಷದ ಅಭ್ಯರ್ಥಿ ಕಾಮ್ರೇಡ್ ಕಲಾವತಿ.ಎನ್ ಅವರನ್ನು ಗೆಲ್ಲಿಸಿ ಎಂದು ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ವಿ.ಎನ್. ರಾಜಶೇಖರ್ ತಿಳಿಸಿದರು.
ಅವರು ಅಂಕತಟ್ಟಿ ನಂಜುಡಪ್ಪ ವೃತದಲ್ಲಿ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ವತಿಯಿಂದ ಲೋಕಸಭಾ ಚುನಾವಣೆಯ ಪಕ್ಷದ ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಕಲಾವತಿ. ಎನ್ ರವರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ವಿ.ಎನ್. ರಾಜಶೇಖರ್ ಅವರು, ೨೦೨೪ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ ಎಂದರು.
ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಕೂಡ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ. ದೇಶದ ೧೯ ರಾಜ್ಯ, ೩ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಮ್ಮ ಪಕ್ಷವು ೧೫೧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು ೧೯ ಕ್ಷೇತ್ರಗಳಲ್ಲಿ ಸ್ಪರ್ಧೆ
ನಡೆಸುತ್ತಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಲಾವತಿ. ಎನ್ ರವರು ಸ್ಪರ್ಧಿಸುತ್ತಿದ್ದಾರೆ. ಕ್ಷೇತ್ರದ ಜನ ಅವರನ್ನು ಬೆಂಬಲಿಸಬೇಕು” ಎಂದು ಹೇಳಿದರು.
”ಕಳೆದ ೧೦ ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ. ೨೦೧೪ರಲ್ಲಿ ಬಿಜೆಪಿ ದನಿ ಎತ್ತಿದ ಬೆಲೆಏರಿಕೆ, ನಿರುದ್ಯೋಗ, ಭ್ರಷ್ಟಾಚಾರದಂತಹ ಸಮಸ್ಯೆಗಳ ಕುರಿತು ಈಗ ಮೌನವಾಗಿದೆ. ಬಿಜೆಪಿ ಹೇಳುವ ವರ್ಷಕ್ಕೆ ೨ ಕೋಟಿ ಉದ್ಯೋಗದ ಮಾತಿರಲಿ, ನಿರುದ್ಯೋಗಿ ಯುವಕರ, ವಿದ್ಯಾರ್ಥಿಗಳ ಆತ್ಮಹತ್ಯೆಯ ಪ್ರಮಾಣ ಕಳೆದ ಮೂರು ವರ್ಷಗಳಲ್ಲಿ ರೈತರ ಆತ್ಮಹತ್ಯೆಯ ಪ್ರಮಾಣವನ್ನು ದಾಟಿದೆ. ಕಪ್ಪುಹಣ, ಸ್ವಿಸ್‌ಬ್ಯಾಂಕ್ ಹಣ ವಶಪಡಿಸುವ ಬಗ್ಗೆ ಇರಲಿ, ಎಸ್‌ಬಿಐಯಲ್ಲಿರುವ ಚುನಾವಣಾ ಬಾಂಡ್ ಕುರಿತು ಮಾಹಿತಿ ನೀಡದಂತೆ ತಡೆಯಲು ಬಿಜೆಪಿ ಸರ್ವ ಪ್ರಯತ್ನ ಮಾಡಿದೆ. ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತವು ಬಹುತೇಕ ಕೆಳಭಾಗದಲ್ಲಿದೆ. ಇದೇ ಸಮಯದಲ್ಲಿ ಪ್ರತೀ ಬಜೆಟ್ ನಲ್ಲಿ ಶ್ರೀಮಂತ ಬಂಡವಾಳಶಾಹಿಗಳ ಲಕ್ಷಾಂತರ ಕೋಟಿ ಹಣ ಸಾಲ ಮನ್ನಾ ಮಾಡಲಾಗುತ್ತಿದೆ. ಎಂದು ದೂರಿದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಏಕೈಕ ಮಹಿಳಾ ಅಭ್ಯರ್ಥಿಯಾದ ಕಲಾವತಿ. ಎನ್ ಮಾತನಾಡುತ್ತಾ, ”ಚಿಕ್ಕಬಳ್ಳಾಪುರಕ್ಕೆuಟಿಜeಜಿiಟಿeಜ ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕೆರೆಗಳನ್ನು ಪುನರ್ಜಿವನಗೋಳಿಸುವುದು,ಹೊಸ ಕೆರೆಗಳನ್ನು ನಿರ್ಮಿಸುವುದು, ಇತ್ಯಾದಿ ಯೋಜನೆಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವುದು ಹಾಗೂ ಚಿಕ್ಕಬಳ್ಳಾಪುರದಲ್ಲಿ ಶ್ರಮ ಆಧಾರಿತ ಕಾರ್ಖಾನೆಗಳನ್ನು ಸ್ಥಾಪಿಸುವುದು ನಮ್ಮ ಚುನಾವಣೆಯ ಪ್ರಮುಖ ಕಾರ್ಯಸೂಚಿ” ಎಂದು ತಿಳಿಸಿದರು. “ಈ ಬಾರಿಯ ಚುನಾವಣೆಯನ್ನು ಕ್ಷೇತ್ರದ ಜನರ ನೈಜ ಸಮಸ್ಯೆಗಳು ಮುನ್ನಲೆಗೆ ತರುವುದು ನಮ್ಮ ಆದ್ಯತೆ” ಎಂದು ಅವರು ಹೇಳಿದರು.
ಪಕ್ಷದ ಕಾರ್ಯಕರ್ತರಾದ ಅಜಯ್, ಶ್ರೀಕಾಂತ್, ಅಪೂರ್ವ, ಕಲ್ಯಾಣ್, ಕಿರಣ್, ಯಶ್ವಂತ್ ಭಾಗವಹಿಸಿದ್ದರು.