(ಸಂಜೆವಾಣಿ ವಾರ್ತೆ)
ಬಳ್ಳಾರಿ, ಮಾ. 25: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಹಲವಿ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಎಸ್ಸಿ ಜಾತಿಗೆ ಒಳಮೀಸಲಾತಿಯನ್ನು ಪ್ರಕಟಿಸಿದರುವುದನ್ನು ಮತ್ತು ವೀರಶೈವ ಲಿಂಗಾಯಿತ, ಪಂಚಮಸಾಲಿ ಮತ್ತು ಒಕ್ಕಲಿಗರಿಗೆ ಮೀಸಲಾತಿ ಸೌಲಭ್ಯ ಘೋಷಣೆ ಮಾಡಿರರುವುದನ್ನು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಸ್ವಾಗತಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವುದು ಸವಾಲಿನ ಕೆಲಸವಾಗಿತ್ತು. ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟವು ಸಮರ್ಥವಾಗಿ ಜಾರಿ ಮಾಡಿದ್ದು, ಎಡಗೈಗೆ ಶೇ. 6, ಬಲಗೈಗೆ ಶೇ. 5.5 ಮತ್ತು ಸ್ಪೃಶ್ಯರಿಗೆ ಶೇ. 4.5 ಹಾಗೂ ಇತರರಿಗೆ ಶೇ. 1 ರಷ್ಟು ಮೀಸಲು ಜಾರಿ ಮಾಡಿರುವುದು ಶ್ಲಾಘನೀಯ ಎಂದಿದ್ದಾರೆ.
ಲಿಂಗಾಯಿತ ಸಮುದಾಯಕ್ಕೆ ಶೇ. 7 ರಷ್ಟು ಮೀಸಲಾತಿ ನೀಡುವ ಮೂಲಕ ಈ ಸಮಾಜವು ಎರೆಡು ದಶಕಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಸರ್ಕಾರ ತಾರ್ತಿಕ ಅಂತ್ಯವನ್ನು ನೀಡಿದೆ. ಶೈಕ್ಷಣಿಕ, ಸಾಮಾಜಿಕ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಮೀಸಲಾತಿ ಸೌಲಭ್ಯವು ಸಾಕಷ್ಟು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.