ಎಸ್ಸಿ ಎಸ್ಟಿ ನೌಕರರ ಪ್ರಥಮ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ

ರಾಯಚೂರು,ಜ.೧೪- ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ ಎಸ್ಟಿ ಸ್ವಾಭಿಮಾನಿ ನೌಕರರ ಪ್ರಥಮ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ ಹಾಗೂ ಪ್ರತಿಭಾವಂತ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಉತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಡಾ. ಬಿ.ಆರ್.ಅಂಬೇಡ್ಕರ್ ಸರ್ವ ಶ್ರೇಷ್ಠ ಸೇವಾ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ ಜನವರಿ ೧೮ ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಜಿಂದಪ್ಪ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ಕರ್ನಾಟಕ ರಾಜ್ಯ ಎಸ್.ಸಿ.ಎಸ್
ಟಿ ನೌಕರರ ಸಮನ್ವಯ ಸಮಿತಿ ವತಿಯಿಂದ ನಗರದ ವಿಶ್ವ ವಿದ್ಯಾಲಯದ ಪ್ರೇಕ್ಷಾ ಗೃಹದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಆಯೋಜಿಸಲಾಗಿದೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮಿಗಳು ವಹಿಸಲಿದ್ದಾರೆ.ಬುದ್ಧ ವಂದನೆಗಳು ಬೀದರ ಧಮ್ಮ ದೀಪ ಬಂತೇಜ ಅವರು ಮಾಡಲಿದ್ದಾರೆ.ಕಾರ್ಯಕ್ರಮ ಉದ್ಘಾಟನೆಯನ್ನು ಶಾಸಕ ಶಿವರಾಜ ಪಾಟೀಲ್ ಮಾಡಲಿದ್ದು, ಡಾ. ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಜಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಭೋಸರಾಜ ಅವರು ಮಾಲಾರ್ಪಣೆ ಮಾಡಲಿದ್ದಾರೆ ಪ್ರಾಸ್ತಾವಿಕವಾಗಿ ಎಸ್.ಸಿ ಎಸ್. ಟಿ ನೌಕರರ ಸಮನ್ವಯ ಸಮಿತಿ ಸಂಚಾಲಕ ತಾಯ್ ರಾಜ್ ಮರ್ಚಟಹಾಳ್ ಮಾತನಾಡಲಿದ್ದಾರೆ.ಅಧ್ಯಕ್ಷತೆಯನ್ನು ಎಸ್.ಸಿ ಎಸ್.ಟಿ ನೌಕರರ ಸಮನ್ವಯ ಸಮಿತಿಯ ಜಿಲ್ಲಾಧ್ಯಕ್ಷ ಜಿಂದಪ್ಪ ವಹಿಸಲಿದ್ದಾರೆ.ಪ್ರಶಸ್ತಿ ಪ್ರಧಾನವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಸಂತಕುಮಾರ ಮಾಡಲಿದ್ದಾರೆ.ಮುಖ್ಯ ಭಾಷಣಕಾರರಾಗಿ ರಾಜ್ಯ ಸರ್ಕಾರಿ ಎಸ್.ಸಿ ಎಸ್. ಟಿ ನೌಕರರ ಸಮನ್ವಯ ಸಮಿತಿಯ ರಾಜ್ಯಾಧ್ಯಕ್ಷ ಡಿ.ಶಿವಶಂಕರ ಆಗಮಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ನಂದಿನಿ, ಎನ್.ಸರಸ್ವತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.