ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಪೂರ್ಣ : ದೊಡ್ಡೆಒಟ್ಟು 13 ಪರೀಕ್ಷಾ ಕೇಂದ್ರಗಳು : ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು 3604

ಸಂಜೆವಾಣಿ ವಾರ್ತೆ
ಔರಾದ್ :ಮಾ.19: 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಇದೆ ತಿಂಗಳ ಮಾರ್ಚ್ ರಿಂದ ಎಪ್ರಿಲ್ 06ರವರೆಗೆ ನಡೆಯಲಿದ್ದು ಪರಿಕ್ಷೆಗೆ ಸಕಲ ಸಿದ್ಧತೆಗಳು ಪೂರ್ಣಗೊಳಿಸಲಾಗಿದೆ, ಔರಾದ-ಕಮಲನಗರ ಸೇರಿ ಒಟ್ಟು 13 ಪರೀಕ್ಷಾ ಕೇಂದ್ರಗಳು ಸ್ಥಾಪಿಸಲಾಗಿದೆ, ಈ ವರ್ಷ 3604 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ ಎಂದು ಬಿಇಒ ಟಿ.ಆರ್ ದೊಡ್ಡೆ ಹೇಳಿದರು.
ಸೋಮವಾರ ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಿಮಿತ್ತ ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಔರಾದ ತಾಲೂಕಿನಲ್ಲಿ 8, ಕಮಲನಗರ ತಾಲೂಕಿನಲ್ಲಿ 5 ಪರೀಕ್ಷೆ ಕೇಂದ್ರಗಳು ಸೇರಿ ಒಟ್ಟು 13 ಪರೀಕ್ಷೆ ಕೇಂದ್ರಗಳು ಸ್ಥಾಪನೆ ಮಾಡಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ವಿದ್ಯಾರ್ಥಿಗಳು ವರ್ಷದಲ್ಲಿ ಮೂರು ಬಾರಿ ಪರೀಕ್ಷೆ ಬರೆಯಬಹುದು. ಆ ಮೂರು ಪರೀಕ್ಷೆ ಬರೆದವರು ಹೆಚ್ಚು ಅಂಕಗಳು ಯಾವ ಪರೀಕ್ಷೆಯಲ್ಲಿ ಬಂದಿರುತ್ತದೋ ಆ ಫಲಿತಾಂಶವನ್ನು ಉಳಿಸಿಕೊಳ್ಳುವ ಅವಕಾಶ ದೊರೆಯಲಿದೆ. ಇದು ಪ್ರಸಕ್ತ ಸಾಲಿನಿಂದ ಜಾರಿಯಾಗಿದೆ ಎಂದರು.
ಕಮಲನಗರ ತಾಲೂಕಿನ ಠಾಣಾಕುಶನೂರ ಗ್ರಾಮದ ಕೆಪಿಎಸ್ ಶಾಲೆಯ ಪರೀಕ್ಷಾ ಕೇಂದ್ರ ಅತಿಸೂಕ್ಷ್ಮ ಕೇಂದ್ರವೆಂದು ಗುರುತಿಸಲಾಗಿದೆ. ಕಮಲನಗರದ ಡಾ. ಚನ್ನಬಸವ ಪಟ್ಟದ್ದೇವರು ಔರಾದನ ಅಮರೇಶ್ವರ ಕಾಲೇಜು, ಸರ್ಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರಗಳು ಎಂದು ಗುತಿಸಲಾಗಿದೆ ಎಂದರು. ಪರೀಕ್ಷೆಗೆ 155 ಕೋಣೆಗಳು ಸಿದ್ಧವಾಗಿದ್ದು, ಎಲ್ಲ ಕೇಂದ್ರಗಳಲ್ಲಿಯೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಅಲ್ಲದೇ ಆನ್‍ಲೈನ್ ಮೂಲಕ ಪರೀಕ್ಷೆ ಕೇಂದ್ರ ನೋಡಲು ವ್ಯವಸ್ಥೆ ಮಾಡಲಾಗಿದೆ. 200 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಮೊಬೈಲ್ ಸ್ವಾಧೀನ ಅಧಿಕಾರಿಗಳ ನೇಮಕವು ಮಾಡಲಾಗಿದೆ ಎಂದರು.
ಸಂದರ್ಭದಲ್ಲಿ ಪ್ರಮುಖರಾದ ಬಿಆರ್‍ಪಿ ಶಶಿಕಾಂತ ಬಿಡವೆ, ಪ್ರಕಾಶ ರಾಠೋಡ್, ನೋಡಲ್ ಅಧಿಕಾರಿ ಈಶ್ವರ ಕ್ಯಾದೆ, ಇಸಿಒ ಬಲಭೀಮ ಕುಲಕರ್ಣಿ, ಆದರ್ಶ ವಿದ್ಯಾಲಯದ ಪ್ರಾಂಶುಪಾಲ ಧೂಳಪ್ಪ ಮಳೆನೂರೆ ಸೇರಿದಂತೆ ಅನೇಕರಿದ್ದರು