ಎಸ್ಸೆಸ್ಸೆಲ್ಸಿ ಪರೀಕ್ಷೆ ಇಬ್ಬರು ಅಧೀಕ್ಷಕರು ಸಸ್ಪೆಂಡ್

ಅಫಜಲಪುರ:ಏ.6: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕರ್ತವ್ಯಲೋಪದ ಅಡಿಯಲ್ಲಿ ಇಬ್ಬರು ಮುಖ್ಯ ಪರೀಕ್ಷಾ ಅಧೀಕ್ಷಕರನ್ನು ಅಮಾನತುಗೊಳಿಸಿ ಡಾ.ಆಕಾಶ ಎಸ್.ಅಪರ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಹಾಗೂ ಶಿಸ್ತು ಪ್ರಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ತಾಲೂಕಿನ ಕರಜಗಿ ಕರ್ನಾಟಕ ಪಬ್ಲಿಕ್ ಶಾಲೆ, ಮಣ್ಣೂರ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಒಡೆದು, ಕೆಲವುಗಳನ್ನು ಕಳ್ಳತನವಾಗಿರುವ ಬಗ್ಗೆ ಪೆÇೀಲಿಸ್ ಠಾಣೆಯಲ್ಲಿ ದೂರು ದಾಖಲಿಸಿ ಅವುಗಳ ದುರಸ್ತಿ ಕಾರ್ಯ ಮಾಡದೇ ಕರ್ತವ್ಯ ಲೋಪ ಎಸಗಿದ್ದಾರೆ. ಈ ಬಗ್ಗೆ ಏಪ್ರಿಲ್ 2ರಂದು ನಡೆಯುತ್ತಿದ್ದ ಗಣಿತ ವಿಷಯದ ಪರೀಕ್ಷಾ ಸಮಯದಲ್ಲಿ ಅಪರ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಇವರು ಖುದ್ದಾಗಿ ಭೇಟಿ ನೀಡಿದಾಗ ಪರೀಕ್ಷಾ ಕೋಣೆಯಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸದೇ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುತ್ತಿರುವುದು ಕಂಡುಬಂದಿದೆ.ಅಲ್ಲದೇ ಮಾರ್ಚ್ 30ರಂದು ಸಿಸಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳದೇ ವಿಜ್ಞಾನ ಪರೀಕ್ಷೆ ನಡೆಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕರ್ತವ್ಯಲೋಪದ ಆರೋಪದಡಿ ಮಣ್ಣೂರ ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದ ಮುಖ್ಯ ಅಧ್ಯಕ್ಷರಾಗಿದ್ದ ಸುನಂದಾ ಬಿಂಗೆ ಹಾಗೂ ಕರಜಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಸುರೇಶ್ ಕೊರಚಗಾಂವ ಇವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.