ಎಸ್ಸೆಸ್ಸೆಲ್ಸಿ ಫಲಿತಾಂಶ: ಆಕ್ಸಫರ್ಡ ಆಯ್ ಆಯ್ ಟಿ ಒಲಂಪಿಯಾಡ್ ಶಾಲೆಗೆ ಶೇ. 100ರಷ್ಟು ಸಾಧನೆಆಫಿಯಾ ಪೀರಜಾದೆ ಜಿಲ್ಲೆಗೆ 4 ನೇ ರ್ಯಾಂಕ್ ಹಾಗೂ ನಗರಕ್ಕೆ ಪ್ರಥಮ ರ್ಯಾಂಕ್

ಸಂಜೆವಾಣಿ ವಾರ್ತೆ,
ವಿಜಯಪುರ,ಮೇ,11:ವಿಜಯಪುರ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ ಆಯ್ ಆಯ್ ಟಿ ಒಲಂಪಿಯಾಡ್ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. 2023-24 ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಆಫಿಯಾ ಪೀರಜಾದೆ 619, ಸುಜಲ್ ದೇಸಾಯಿ 617, ಭೂಮಿಕಾ ಧರೆಪ್ಪಗೋಳ 615, ಆಯುಶಾ ಶಿರಶ್ಯಾಡ 614, ನೂರೆನ ಮುಜಾವರ 613, ರಷ್ಟು ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ, ದ್ವಿತೀಯ, ತೃತೀಯ, ನಾಲ್ಕನೇ ಹಾಗೂ ಐದನೆಯ ಸ್ಥಾನಗಳನ್ನು ಪಡೆಯುವುದರೊಂದಿಗೆ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ.
ಪರೀಕ್ಷೆಗೆ ಹಾಜರಾದ 82 ವಿದ್ಯಾರ್ಥಿಗಳಲ್ಲಿ 53 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‍ನಲ್ಲಿ, 28 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 01 ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಶೇ. 100ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕನ್ನಡ ವಿಷಯದಲ್ಲಿ 100 ಕ್ಕೆ 100 ರಷ್ಟು ಅಂಕ 05 ವಿದ್ಯಾರ್ಥಿಗಳು, ಹಿಂದಿ ವಿಷಯದಲ್ಲಿ 100 ಕ್ಕೆ 100 ರಷ್ಟು ಅಂಕ 06 ವಿದ್ಯಾರ್ಥಿಗಳು, ಗಣಿತ ವಿಷಯದಲ್ಲಿ 100 ಕ್ಕೆ 100 ರಷ್ಟು ಅಂಕ 05 ವಿದ್ಯಾರ್ಥಿಗಳು, ವಿಜ್ಞಾನ ವಿಷಯದಲ್ಲಿ 100 ಕ್ಕೆ 100 ರಷ್ಟು ಅಂಕ 01, ಸಮಾಜ ವಿಜ್ಞಾನ ವಿಷಯದಲ್ಲಿ 100 ಕ್ಕೆ 100 ರಷ್ಟು ಅಂಕ 01 ವಿದ್ಯಾರ್ಥಿಗಳು ಪಡೆದಿದ್ದಾರೆ. 12 ಜನ ವಿದ್ಯಾರ್ಥಿಗಳು 600 ಕಿಂತ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕಾರ್ಯದರ್ಶಿ ಬಸವರಾಜ ಕೌಲಗಿ, ಶಾಲೆಯ ಆಡಳಿತಾಧಿಕಾರಿ ಪ್ರದೀಪ ಲಿಂಗದಳ್ಳಿ, ಶಾಲೆಯ ಮುಖ್ಯ ಗುರುಗಳು, ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.