ಎಸ್ಸೆಸ್ಸೆಲ್ಸಿ ಫಲಿತಾಂಶ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ವಿಜಯಪುರ,ಮೇ.11 :ಆದರ್ಶನಗರದಲ್ಲಿ ಇರುವ ಶಾಂತಿನಿಕೇತನ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಕುಮಾರಿ ಗುರುದೇವಿ ಪಾಟೀಲ, ಕುಮಾರ ಕಾರ್ತಿಕ ಚವ್ಹಾಣ ಮತ್ತು ಕುಮಾರಿ ಉನ್ನತಿ ಮೆಹ್ತಾ ಹಾಗೂ ಈ ವಿದ್ಯಾರ್ಥಿಗಳ ಪಾಲಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಚೇರಮನ್ ಡಾ. ಸುರೇಶ ಬಿರಾದಾರ ಅವರು ವಿದ್ಯಾರ್ಥಿಗಳನ್ನು ಮತ್ತು ಪಾಲಕರನ್ನು ಹಾರೈಸಿ ಅಭಿನಂದಿಸಿದರು.
ಇದೇ ವೇಳೆ ಸಂಸ್ಥೆಯ ಅಧ್ಯಕ್ಷೆ ಶೀಲಾ ಬಿರಾದಾರ ಅವರು ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಅಭಿನಂದಿಸಿದರು
10ನೇ ತರಗತಿಯ ಪರೀಕ್ಷೆಗೆ ಒಟ್ಟು 95 ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ 91 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಇದರಲ್ಲಿ ಒಟ್ಟು 24 ವಿದ್ಯಾರ್ಥಿಗಳು ಶೇ.90ಕ್ಕಿಂತ ಅಧಿಕ ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ.