ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಾಸಿಂಗ್ ಪ್ಯಾಕೇಜ್ ವಿತರಣೆ


ಸಂಜೆವಾಣಿ ವಾರ್ತೆ
ಹೂವಿನಹಡಗಲಿ, ಫೆ.23: ತಾಲೂಕಿನ ಸೋಗಿ ಗ್ರಾಮದ ಪಟ್ಟೇದ ಸಿದ್ದಮಲ್ಲಪ್ಪ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಾಸಿಂಗ್ ಪ್ಯಾಕೇಜ್ ವಿತರಿಸಲಾಯಿತು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ  ಕುರಿ ದೇವಪ್ಪ ಅವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಾಸಿಂಗ್ ಪ್ಯಾಕೇಜ್ ಕೊಡುಗೆಯಾಗಿ ನೀಡಿ, ಉತ್ತಮ ಅಭ್ಯಾಸ ಮಾಡಿ ಪರೀಕ್ಷೆಯಲ್ಲಿ ಯಶಸ್ಸು ಪಡೆಯುವಂತೆ ತಿಳಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಯು. ಆನಂದ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಪ್ರಮುಖ ಘಟ್ಟವಾಗಿದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ಪರಿಶ್ರಮದಿಂದ ಅಭ್ಯಾಸ ಮಾಡಿ ಪರೀಕ್ಷೆ ಎದುರಿಸಬೇಕು. ಯಾವುದೇ, ಭಯ, ಆತಂಕವಿಲ್ಲದೇ ಪರೀಕ್ಷಾ ಕೇಂದ್ರಕ್ಕೆ ತೆರಳಬೇಕು ಎಂದು  ಹೇಳಿದರು. ಶಿಕ್ಷಕರಾದ ರವಿಕುಮಾರ್, ಗುರುಬಸವರಾಜ, ಜಿ.ಎಸ್.ಎಂ.ಕೊಟ್ರಯ್ಯ ಇದ್ದರು.