ಎಸ್ಸೆಸ್ಸೆಲ್ಸಿ ಸಾಧಕರಿಗೆ ಬಹುಮಾನ ವಿತರಣೆ

ಕೋಲಾರ,ಜೂ,೯- ಉಲುಚುಕಮ್ಮೆ ಬ್ರಾಹ್ಮಣ ಮಹಾಸಭಾ ಕೋಲಾರ ಶಾಖೆ ಅಧ್ಯಕ್ಷ ವಕೀಲ ಸಾ.ನಾ.ಮೂರ್ತಿ ತಾಲ್ಲೂಕಿನ ಷಾಪೂರು ಶಾಲೆಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ತಾಲ್ಲೂಕಿನ ಕೆಂಬೋಡಿ ಜನತಾ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಷಾಪೂರು ಶಾಲೆಯ ಸಾಧಕರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಇದು ಇತರೆ ವಿದ್ಯಾರ್ಥಿಗಳಿಗೆ ಸ್ಪೂರ್ತಿ ಹಾಗೂ ಪ್ರೇರಣೆಯಾಗಲಿದೆ ಎಂದು ತಿಳಿಸಿದರು.
ಗ್ರಾಮೀಣ ಮಕ್ಕಳು ಇಂದು ಉತ್ತಮ ಸಾಧನೆ ಮಾಡುತ್ತಿದ್ದಾರೆ, ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರವನ್ನು ಬೆಳೆಸುವ ಕೆಲಸವಾಗಬೇಕು ಎಂದ ಅವರು, ಶಾಲೆಗಳಲ್ಲಿ ಅಂಕ ಗಳಿಕೆ ಜತೆಗೆ ಸಮಗ್ರ ಶಿಕ್ಷಣದ ಭಾಗವಾಗಿ ಕ್ರೀಡೆ,ಸಾಂಸ್ಕೃತಿಕ ಚಟುವಟಿಕೆಗಳಿಗೂ ಒತ್ತು ನೀಡಬೇಕು ಎಂದರು.
ಷಾಪೂರು ಶಾಲೆಯಲ್ಲಿ ೨೦೨೩-೨೦೨೪ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮೊದಲು ಇಬ್ಬರು ವಿಧ್ಯಾರ್ಥಿಗಳಾದ ಅಂಕಿತ, ಐಶ್ವರ್ಯ ಅವರಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ವಕೀಲ ಸಾ.ನಾ.ಮೂರ್ತಿ ಹಿರಿಯ ವಕೀಲ ಬಿಸಪ್ಪ ಗೌಡ, ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಗ್ರಾಮಸ್ಥರು, ಪೋಷಕರು,ಮಕ್ಕಳು ಹಾಜರಿದ್ದರು.