ಎಸ್‌ಡಿಪಿಐ ನಿಷೇಧಕ್ಕೆ ಆಗ್ರಹ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ

ಪುತ್ತೂರು, ಜ.೩- ಮತಎಣಿಕೆ ವೇಳೆ ಉಜಿರೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಎಸ್‌ಡಿಪಿಐ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಎಬಿವಿಪಿ ಪುತ್ತೂರು ಘಟಕದಿಂದ ಪುತ್ತೂರು ವಿವೇಕಾನಂದ ಕಾಲೇಜ್ ಬಳಿಯ ವಿವೇಕಾನಂದ ಪ್ರತಿಮೆ ಬಳಿ ಶನಿವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪಾಕಿಸ್ತಾನದ ಧ್ವಜಕ್ಕೆ ಬೆಂಕಿಕೊಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂ ಜಾಗರಣಾ ವೇದಿಕೆ ಮಾತ್ರಸುರಕ್ಷಾ ಪ್ರಮುಖ್ ಮಂಗಳೂರು ವಿಭಾಗ ಸಂಯೋಜಕ್ ಗಣರಾಜ್ ಭಟ್ ಕೆದಿಲ, ಪಾಕಿಸ್ತಾನ ಪರ ಘೋಷಣೆ ಕೂಗಿದ ಎಸ್‌ಡಿಪಿಐಯನ್ನು ನಿಷೇಧಿಸುವವರೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿರಮಿಸುವುದಿಲ್ಲ ಎಂದು ಹೇಳಿದರು.

ಈ ಸಂದರ್ಭ ಎಬಿವಿಪಿ ನಗರ ಕಾರ್ಯದರ್ಶಿ ಜಗದೀಶ್, ಕಾರ್ಯಕರ್ತರು ಉಪಸ್ಥಿತರಿದ್ದರು.