ಎಸ್‌ಪಿಬಿ ಆರೋಗ್ಯದಲ್ಲಿ ಚೇತರಿಕೆ

ಚೆನ್ನೈ,ಸೆ.೧೫- ಶ್ವಾಸಕೋಶ ಸೋಂಕು ಮತ್ತು ಕೋವಿಡ್ ನಿಂದ ಬಳಲುತ್ತಿದ್ದ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಈಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿರುವ ಬಾಲಸುಬ್ರಹ್ಮಣ್ಯಂ ಅವರು ಶ್ವಾಸಕೊಶದ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ಪುತ್ರ ಎಸ್.ಪಿ ಚರಣ್ ತಿಳಿಸಿದ್ದಾರೆ.
ಶ್ವಾಸಕೋಶದ ಸೋಂಕಿನ ಸಮಸ್ಯೆ ನಿಧಾನವಾಗಿ ಸುಧಾರಿಸುತ್ತದೆ.ಎಕ್ಸ್ ರೇ ನಲ್ಲಿ ಅದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಫಿಸಿಯೋತೆರಪಿ ಮಾಡಲಾಗುತ್ತಿದ್ದು ಕನಿಷ್ಠ ಹದಿನೈದರಿಂದ ಇಪ್ಪತ್ತು ನಿಮಿಷ ಕುಳಿತುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ನೇರವಾಗಿ ಆಹಾರ ನೀಡುವ ಪ್ರಕ್ರಿಯೆಯು ಆರಂಭವಾಗಿದ್ದು ಅವರು ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ ಇದು ಖುಷಿಯ ಸಂಗತಿ ಎಂದು ಅವರು ಹೇಳಿದ್ದಾರೆ.
ಚೆನ್ನೈನ ಎಂ ಜಿ ಎಂ ಆಸ್ಪತ್ರೆಯಲ್ಲಿ ಡಾ. ಬಾಲಸುಬ್ರಹ್ಮಣ್ಯಂ ಅವರಿಗೆ ಆಗಸ್ಟ್ ೫ರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಸುಬ್ರಹ್ಮಣ್ಯಮ್ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ ವಿವಿಧ ಭಾಷೆಯ ಚಿತ್ರರಂಗದ ಗಣ್ಯರು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ದೇಶದ ವಿವಿಧ ೧೬ ಭಾಷೆಗಳಲ್ಲಿ ೪೦ ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿರುವ ಬಾಲಸುಬ್ರಹ್ಮಣ್ಯಂ ಅವರು ಆರು ಬಾರಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಾರೆ