ಎಸ್‌ಪಿ ಕಛೇರಿಯಲ್ಲಿ ಭ್ರಷ್ಟಾಚಾರ ತಡೆ ದಿನಾಚರಣೆ

ಕೆ.ಜಿ.ಎಫ್. ಅ,೨೮:ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿಂದು ಭ್ರಷ್ಟಾಚಾರ ತಡೆಗಟ್ಟುವ ದಿನವನ್ನು ಆಚರಣೆ ಮಾಡಿ, ಭ್ರಷ್ಟಾಚಾರದ ವಿರುದ್ದ ಹೋರಾಟವನ್ನು ಬೆಂಬಲಿಸುವ ಕುರಿತು ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.
ಜಿಲ್ಲಾ ಪೊಲೀಸ್ ಕಛೇರಿಯ ಡಿಸಿಐಬಿ ಇನ್ಸ್‌ಪೆಕ್ಟರ್ ಜಿ.ಪಿ.ರಾಜು ಅವರ ನೇತೃತ್ವದಲ್ಲಿ ನಡೆದ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು, ನಮ್ಮ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ದಿಗೆ ಭ್ರಷ್ಟಾಚಾರವು ಒಂದು ಪ್ರಮುಖ ಅಡಚಣೆಯಾಗಿದೆಯೆಂದು ನಾವು ನಂಬುತ್ತಾ, ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸರ್ಕಾರ, ನಾಗರಿಕರು ಮತ್ತು ಖಾಸಗಿ ವಲಯದ ಎಲ್ಲಾ ಪಾಲುದಾರರು ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆಂದು ಹಾಗೂ ಪ್ರತಿ ನಾಗರಿಕನು ಜಾಗರೂಕನಾಗಿದ್ದು, ಎಲ್ಲಾ ಸಮಯದಲ್ಲೂ ಉನ್ನತ ಗುಣಮಟ್ಟದ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ದನಾಗಿರಬೇಕೆಂದು ಹಾಗೂ ಭ್ರಷ್ಟಾಚಾರದ ವಿರುದ್ದ ಹೋರಾಟವನ್ನು ಬೆಂಬಲಿಸಬೇಕೆಂದು ಅರಿತಿದ್ದೇವೆ.
ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳನ್ನು ಅನುಸರಿಸುತ್ತೇನೆ, ಲಂಚವನ್ನು ಪಡೆಯುವುದಿಲ್ಲ ಹಾಗೂ ನೀಡುವುದೂ ಇಲ್ಲ, ಸಾರ್ವಜನಿಕ ಹಿತಾಸಕ್ತಿಯಲ್ಲಿ ಪಾರದರ್ಶಕ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತೇವೆ, ನಿಷ್ಠೆ ಪ್ರದರ್ಶಿಸುವ ಮೂಲಕ ಯಾವುದೇ ಭ್ರಷ್ಟಾಚಾರದ ಘಟನೆಯನ್ನು ತಡೆಯಲು ದೂರು ನೀಡುತ್ತೇನೆ ಎಂದು ಪ್ರತಿಜ್ಞೆ ಸ್ವೀಕರಿಸಿದರು.ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ಶಾಖಾಧೀಕ್ಷಕರಾದ ಎಂ.ಮೂರ್ತಿ, ಎ.ನಜೀಮಾಬಾನು, ಸೇರಿದಂತೆ ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಇದ್ದರು.