ಎಸ್‍ಡಿಪಿಐ ಪ್ರತಿಭಟನೆ

ಹುಬ್ಬಳ್ಳಿ ಜ, 4: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸೊಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ನಗರದ ತಹಶೀಲ್ದಾರ್ ಕಛೇರಿಯ ಮುಂದೆ ಪ್ರತಿಭಟನೆ ನಡೆಸಿತು.
ಕಳೆದ ಡಿಸೆಂಬರ್ 30 ರಂದು ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶದ ದಿನ ಉಜಿರೆಯ ಮತಕೇಂದ್ರದ ಹೊರಗಡೆ ಕೆಲವರಿಂದ ಪಾಕಿಸ್ತಾನದ ಪರ ಘೋಷಣೆಯನ್ನು ಕೂಗಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಬಂಧಿಸಿ ದೇಶ ದ್ರೋಹ ಪ್ರಕರಣ ದಾಖಲಿಸಲಾಗಿತ್ತು. ಆದರೆ ಬಂಧಿಸಿದವರು ಅಮಾಯಕರಾಗಿದ್ದು, ನಿಜವಾದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಎಸ್.ಡಿ.ಪಿ.ಐ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿತು.
ನಂತರ ಪ್ರತಿಭಟನಾಕಾರರು ತಹಶೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.