ಎಸ್‍ಬಿಆರ್‍ನಲ್ಲಿ ರಾಷ್ಟ್ರೀಯ ಗಣಿತ ದಿನ ಆಚರಣೆ

ಕಲಬುರಗಿ ಡಿ 23: ನಗರದ ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವದ ಶ್ರೇಷ್ಠ ಗಣಿತ ತಜ್ಞರೆಂದು ಪ್ರಖ್ಯಾತರಾದ ಶ್ರೀನಿವಾಸ ರಾಮಾನುಜನ್ ಅವರ ಜಯಂತಿಯನ್ನು ರಾಷ್ಟ್ರೀಯ ಗಣಿತ ದಿನವನ್ನಾಗಿ ಆಚರಿಸಲಾಯಿತು.
ಕಾಲೇಜಿನ ಮೇಲ್ವಿಚಾರಕರಾದ ಶ್ರೀಶೈಲ ಹೊಗಾಡೆ ಅವರ ನೇತೃತ್ವದಲ್ಲಿ ಗಣಿತ ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿವರ್ಗ ಸೇರಿ ಶ್ರೀನಿವಾಸ ರಾಮಾನುಜನ್ ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಮಾಲಾರ್ಪಣೆ ಮಾಡುವದರ ಮೂಲಕ ಕಾರ್ಯಕ್ರಮ ನೆರವೇರಿಸಿದರು.
ಡಿಸ್ಕವರಿ ಆಫ್ ಇಂಡಿಯಾದಲ್ಲಿ ಪಂ.ಜವಾಹರಲಾಲ್ ನೆಹರು ಅವರು ಶ್ರೀನಿವಾಸ ರಾಮಾನುಜನ್ ಅವರ ಬಗ್ಗೆ ಹೀಗೆ ಬರೆದಿದ್ದಾರೆ ” ದಕ್ಷಿಣಭಾರತದ ಒಂದು ಬಡಬ್ರಾಹ್ಮಣ ಕುಟುಂಬದಲ್ಲಿ ಜನಿಸಿ ಸೂಕ್ತ ವಿದ್ಯಾಭ್ಯಾಸಕ್ಕೆ ಅವಕಾಶವಿಲ್ಲದೇ ಅವರು ಮದರಾಸಿನಲ್ಲಿ ಕಾರಕೂನರಾಗಿ ಕೆಲಸ ಆರಂಭಿಸಿದರು. ಆದರೆ ಅವರು ಸಹಜ ಪ್ರತಿಭೆಯ ಯಾವುದೇ ತಡೆಯಲಾಗದ ಲಕ್ಷಣಗಳಿಂದ ಹೊರಹೊಮ್ಮುತ್ತಿದ್ದರು.ಮುಂದೆ ಅವರು ಕೆಂಬ್ರಿಜ್ ಗೆ ತೆರಳಿ ಅಲ್ಲಿ ಬಹಳ ಅಲ್ಪ ಕಾಲದಲ್ಲಿ ವಿಸ್ಮಯಕರ ಸ್ವಂತಿಕೆಯ ಕಾರ್ಯವೆಸಗಿದರು” ಎಂದು ಕಾರ್ಯಕ್ರಮದಲ್ಲಿ ಶ್ರೀನಿವಾಸ ರಾಮಾನುಜನ್ ಅವರ ಬಗ್ಗೆ ವಿಚಾರಗಳನ್ನು ಮಂಡಿಸಲಾಯಿತು
ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ವಿಷಯಗಳ ಮುಖ್ಯಸ್ಥರು,ಉಪನ್ಯಾಸಕರು,ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡು ಸರಳವಾಗಿ ಕಾರ್ಯಕ್ರಮ ಆಚರಿಸಲಾಯಿತು.