ಎಸ್ ಎಸ್ ಎಂ ಜನ್ಮದಿನ ಪ್ರಯುಕ್ತ ಅನ್ನಸಂತರ್ಪಣೆ

ಸಂಜೆವಾಣಿ ವಾರ್ತೆ
ದಾವಣಗೆರೆ.ಸೆ.೨೩;   ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ರವರ 56 ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆಯ 31ನೇ ವಾರ್ಡಿನ  ಸದಸ್ಯರಾದ ಪಾಮೇನಹಳ್ಳಿ ನಾಗರಾಜ್ ಮತ್ತು ಪಾಲಿಕೆಯ 41 ನೇ ವಾರ್ಡಿನ  ಮಾಜಿ ಸದಸ್ಯರಾದ ಶ್ರೀಮತಿ ಶೈಲಾ ನಾಗರಾಜ್  ನೇತೃತ್ವದಲ್ಲಿ ಶ್ರೀರಾಮನಗರದಲ್ಲಿರುವ ಶ್ರೀ ಕರಿಯಾಂಬಿಕ ದೇವಸ್ಥಾನದ ಆವರಣದಲ್ಲಿ ವಿಶೇಷವಾಗಿ ಹೋಳಿಗೆ ಊಟವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಸಚಿವ ಎಸ್ ಎಸ್.ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಹಾಗೂ ಕಾಂಗ್ರೆಸ್ ಮುಖಂಡರು ಅಭಿಮಾನಿಗಳು ಉಪಸ್ಥಿತರಿದ್ದರು.ಇದೇ ವೇಳೆ ಎಸ್ ಎಸ್ ಎಂ‌ ಅಭಿಮಾನಿಗಳು ಆಯೋಜಿಸಿದ್ದ ಸಮಾರಂಭದಲ್ಲಿ ಸಚಿವರು‌ ಕೇಕ್ ಕತ್ತರಿಸುವ ಮೂಲಕ ಜನ್ಮದಿನ ಆಚರಿಸಿಕೊಂಡರು.