ಎಸ್ ಎಸ್ ಎಂ ಜನ್ಮದಿನ;  ಬಾಪೂಜಿ ಹೆಲ್ತ್ ಕಾರ್ಡ್ ಕೊಡುಗೆ

ಸಂಜೆವಾಣಿ ವಾರ್ತೆ

ದಾವಣಗೆರೆ.ಸೆ‌.೨೩;   ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಜನ್ಮದಿನದ ಪ್ರಯುಕ್ತ  ನಗರದ ಬಾಪೂಜಿ ಸಮೂಹ ಆಸ್ಪತ್ರೆಗಳಲ್ಲಿ ಜನಸಾಮಾನ್ಯರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಕೈಗೆಟುಕುವ ರಿಯಾಯಿತಿ ದರದಲ್ಲಿ ನೀಡುವ ಉದ್ದೇಶದಿಂದ ರಾಜ್ಯಾದ್ಯಂತ ನಮ್ಮ ನಡೆ ಸದೃಢ ಆರೋಗ್ಯದೆಡೆ ಎಂಬ ಹೆಸರಿನ “ಬಾಪೂಜಿ ಹೆಲ್ತ್ ಕಾರ್ಡ್” ಕೊಡುಗೆ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕರ‍್ಯದರ್ಶಿ ಡಾ. ಶಾಮನೂರು ಶಿವಶಂಕರಪ್ಪನವರು ಹೆಲ್ತ್ ಕಾರ್ಡ್ನ್ನು ಫಲಾನುಭವಿಗಳಿಗೆ ವಿತರಿಸುವ ಮೂಲಕ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ಬಾಪೂಜಿ ಸಮೂಹ ಆಸ್ಪತ್ರೆಗಳಾದ ಬಾಪೂಜಿ ಆಸ್ಪತ್ರೆ, ಎಸ್.ಎಸ್ ಹೈಟೆಕ್ ಆಸ್ಪತ್ರೆ, ಬಾಪೂಜಿ ಮಕ್ಕಳ ಆಸ್ಪತ್ರೆ, ಬಾಪೂಜಿ ಕಣ್ಣಿನ ಆಸ್ಪತ್ರೆ, ಎಸ್. ಎಸ್. ಸ್ಪರ್ಶ ಹಾಗೂ ಎಸ್.ಎಸ್.ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಈ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಬಾಪೂಜಿ ಸಮೂಹ ಆಸ್ಪತ್ರೆಗಳಲ್ಲಿ ಎಲ್ಲಾ ಚಿಕಿತ್ಸೆಗಳಿಗೆ ರಿಯಾಯಿತಿ ನೀಡಬೇಕೆಂಬ ಆಶಯದಂತೆ ರಾಜ್ಯಾದ್ಯಂತ ಬಾಪೂಜಿ ಹೆಲ್ತ್ ಕಾರ್ಡ್ ವ್ಯವಸ್ಥೆ ಮಾಡಲಾಗಿದೆ ಎಂದರು.ಈ ಸಂದರ್ಭದಲ್ಲಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಎಸ್.ಎಸ್.ಕೇರ್ ಟ್ರಸ್ಟ್ ಡಾ.ಪ್ರಭಾ ಮಲ್ಲಿಕಾರ್ಜುನ್, ಜೆಜೆಎಂ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಕ್ಲಾಶೆಟ್ಟಿ, ಎಸ್.ಎಸ್.ಐ.ಎಂ.ಎಸ್. ಪ್ರಾಚಾರ್ಯ ಡಾ.ಬಿ.ಎಸ್.ಪ್ರಸಾದ್, ನಿರ್ದೇಶಕರಾದ ಡಾ.ಅರುಣಕುಮಾರ್ ಅಜ್ಜಪ್ಪ, ಬಾಪೂಜಿ ಮಕ್ಕಳ ಆಸ್ಪತ್ರೆ ಎಚ್.ಒ.ಡಿ. ಡಾ.ಮೂಗನಗೌಡ, ಬಾಪೂಜಿ ಆಸ್ಪತ್ರೆಯ ನಿರ್ದೇಶಕ ಡಾ.ಡಿ.ಕೆ.ಕುಮಾರ್, ಡಾ.ಧನ್ಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.