ಎಸ್ ಎಸ್ ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಕೆ 

ದಾವಣಗೆರೆ.ಏ.೧;ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ವತಿಯಿಂದ ಗ್ರಾಮಾಂತರ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಪೆನ್ನುಗಳನ್ನು ವಿತರಿಸುವ ಮೂಲಕ ಪರಿಷತ್ತಿನ ಅಧ್ಯಕ್ಷರಾದ ಡಾ. ರವಿಕುಮಾರ್ ಎಜೆ ಹಾಗೂ ಪದಾಧಿಕಾರಿಗಳಾದ ಕೆ ನಾಗರಾಜ್ ಮತ್ತು ಶ್ರೀಮತಿ ಶುಭ ಐನಳ್ಳಿಯವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.