ಹುಬ್ಬಳ್ಳಿ,ಮಾ31 : ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆ ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿದ್ದು, ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿಂದು ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡ ಪರೀಕ್ಷೆ ಬರೆದರು.
ಹುಬ್ಬಳ್ಳಿ ನಗರದಲ್ಲಿ 34,ಗ್ರಾಮೀಣ 16, ಧಾರವಾಡ ನಗರ 21, ಧಾರವಾಡ ಗ್ರಾಮೀಣ 14, ಕಲಘಟಗಿ 10, ಕುಂದಗೋಳ 8, ನವಲಗುಂದ 9 ಒಟ್ಟು ಧಾರವಾಡ ಜಿಲ್ಲೆಯಲ್ಲಿ 112 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿವೆ.
ಏ. 14 ರವರೆಗೆ ನಡೆಯಲಿರುವ ಎಸ್. ಎಸ್. ಎಲ್.ಸಿ ಪರೀಕ್ಷೆ ನಡೆಯಲಿದ್ದು, ಪ್ರತಿ ವಿದ್ಯಾರ್ಥಿಗಳು ಮಾಸ್ಕ್ ಹಾಕಿಕೊಂಡು ಪರೀಕ್ಷೆ ಬರೆಯುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತಲೂ 200 ಮೀಟರ್ ನಿಷೇಧಾಜ್ಞೆ ಹೊರಡಿಸಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸ್ಕ್ವಾಡ್ ಗಳನ್ನು ನೇಮಿಸಲಾಗಿದ್ದು, ಪ್ರತಿ ವಿದ್ಯಾರ್ಥಿಯನ್ನು ತಪಾಸಣೆ ಮಾಡಿ ಪರೀಕ್ಷೆ ಕೊಠಡಿಗೆ ತೆರಳುವ ಅವಕಾಶ ನೀಡಲಾಯಿತು. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪೆÇಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.