(ಸಂಜೆವಾಣಿ ವಾರ್ತೆ)
ಬಳ್ಳಾರಿ:ಮಾ,31- ರಾಜ್ಯದೆಲ್ಲೆಡೆಯಂತೆ ಜಿಲ್ಲೆಯಲ್ಲಿ ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಆರಂಭಗೊಂಡಿವೆ.
ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ತಮ್ಮ ತಮ್ಮ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ಕೊಠಡಿಗಳುನ್ನು ಗುರುತಿಸಿಕೊಂಡು ಪರೀಕ್ಷೆ ಬರೆದರು.
ಜಿಲ್ಲೆಯಲ್ಲಿ 71 ಪರೀಕ್ಷಾ ಕೇಂದ್ರಗಳಿವೆ. 23404 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ. ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ಬರೆದರು.