ಎಸ್.ಎಸ್.ಎಲ್.ಸಿ ಪರೀಕ್ಷೆ : ಕೃಪಾನಿಲಯ ಪ್ರೌಢ ಶಾಲೆಗೆ ಶೇ 100 ಫಲಿತಾಂಶ


ಸಂಜೆವಾಣಿ ವಾರ್ತೆ
ಸಂಡೂರು:ಮೇ:11: ಪಟ್ಟಣದ ಕೃಪಾನಿಲಯ ಪ್ರೌಢ ಶಾಲೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಲಭಿಸಿದೆ.ಶಾಲೆಯ ವಿದ್ಯಾರ್ಥಿಗಳಾದ ಎಸ್. ಅರ್ಚನಾ 609 (ಶೇ 97.44), ಎಸ್. ಸಫೂರಾಬಾನು 597 (ಶೇ 95.52) ಹಾಗೂ ಬಿ. ಅರ್ಚನಾ ಅವರು 591 (ಶೇ 94.56) ಅಂಕಗಳನ್ನು ಗಳಿಸಿ ಶಾಲೆಯಲ್ಲಿ ಕ್ರಮವಾಗಿ ಪ್ರಥಮ, ದ್ವಿತಿಯ ಹಾಗೂ ತೃತಿಯ ಸ್ಥಾನವನ್ನು ಗಳಿಸಿದ್ದಾರೆ. ಪರೀಕ್ಷೆಗೆ ಕುಳಿತ 109 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‍ನಲ್ಲಿ, 83 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ನಾಲ್ಕು ವಿದ್ಯಾರ್ಥಿಗಳು ದ್ವಿತಿಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ವ್ಯವಸ್ಥಾಪಕರಾದ ಸಿಸ್ಟರ್ ಸಿಸಿಲಿಯಾ ಫೆಲಿಕ್ಸ್, ಮುಖ್ಯ ಶಿಕ್ಷಕಿ ಸಿಸ್ಟರ್ ಶೆರ್ಲಿ ಹಾಗೂ ಸಿಬ್ಬಂದಿ ವರ್ಗದವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.