ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ

ರಾಯಚೂರು,ಜ.೧೨-
ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಸುಧಾರಿಸಲು ಉತ್ತಮವಾಗಿ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರನೆ ಕುರಿತು ಜಿಲ್ಲೆಯ ಎಲ್ಲ ಪ್ರೌಢಶಾಲೆ ಮುಖ್ಯೋಪಾಧ್ಯಯರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಸಂಬಂಧಪಟ್ಟ ಅಧಿಖಾರಿಗಳು ಹಾಗೂ ಜಿಲ್ಲೆಯ ಎಲ್ಲ ಪ್ರೌಢಶಾಲಾ ಮುಖ್ಯೋಪಾಧ್ಯಯರು ಹಾಗೂ ಶಿಕ್ಷಕರು ಹೆಚ್ಚಿನ ಶ್ರಮ ವಹಿಸಿ, ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡುವುದರ ಜೊತೆಗೆ ಉತ್ತಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕೆಂದು ಸೂಚಿಸಿದರು.
ಇದೇ ವೇಳೆ ಜಿಲ್ಲಾ ಪಂಚಾಯತ್ ಮುಕ್ಯ ಕಾರ್ಯನಿರ್ವಾಹಕಾಧಿಕಾರಿ ಶಶಿಧರ ಕುರೇರ ಮಾತನಾಡಿ, ಕಳೆದ ವರ್ಷಕ್ಕಿಂತ ಈ ಬಾರಿ ಜಿಲ್ಲೆಗೆ ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮವಾಗಿರಬೇಕು. ಶೇ.೧೦೦ ರಷ್ಟು ಫಲಿತಾಂಶ ತರುವುದನ್ನು ಗುರಿಯನ್ನಾಗಿಸಿಕೊಂಡು, ವಿದ್ಯಾರ್ಥಿಗಳಿಗೆ ಪುರ್ವಸಿದ್ದತೆಗಾಗಿ ಹೆಚ್ಚಿನ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ ಜಿಲ್ಲೆಯಿಂದ ಫಲಿತಾಂಶ ಸುಧಾರಣೆಗಾಗಿ ಕೈಗೊಳ್ಳಲಾಗದ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಅಧಿಕಾರಿ, ರಾಷ್ಟ್ರೀಯ ಮಾದ್ಯಮಿಕ ಶಿಕ್ಷಣ ಅಭಿಯಾನದ ಅಧಿಕಾರಿಗಳು, ಅಕ್ಷರದಾಸೋಹದ ಶಿಕ್ಷಣಾಧಿಕಾರಿಗಳು, ಎಸ್‌ಎಸ್‌ಎಲ್‌ಸಿ ಜಿಲ್ಲಾ ಮತ್ತು ತಾಲೂಕ ನೋಡಲ್ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರು, ಕ್ಷೇತ್ರ ಸಮನ್ವಯಾಧಿಕಾರಿಗಳು, ತಾಲೂಕ ಅಕ್ಷರ ದಾಸೋಹ ಅಧಿಕಾರಿಗಳು, ಇಸಿಓ ಹಾಗೂ ಬಿ.ಆರ್.ಪಿಯವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.