ಎಸ್ ಎಸ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ 

ದಾವಣಗೆರೆ.ಜೂ.೨; ನಗರದ ಎಸ್ ಎಸ್ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿ ಸಂಘ `ಸಮನ್ವಯ’ 2023ರ ಉದ್ಘಾಟನಾ ಸಮಾರಂಭವನ್ನು  ಅದ್ದೂರಿಯಾಗಿ ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಡಾ. ಪ್ರಭಾ ಮಲ್ಲಿಕಾರ್ಜುನ್ ರನ್ನು ಸನ್ಮಾನಿಸಲಾಯಿತು.ನಂತರ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವೈದ್ಯಕೀಯ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಹಾಗೂ ವಿದ್ಯಾರ್ಥಿ ಸಂಘದ ವಿವಿಧ ಸಮಿತಿಗಳ ಮಹತ್ವವನ್ನು ಮತ್ತು ಜವಾಬ್ದಾರಿಯನ್ನು ತಿಳಿಸಿದರು.ಇದುವರೆಗೂ ಎಸ್ ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಎಸ್ ಎಸ್ ಕೇರ್ ಟ್ರಸ್ಟ್ ವತಿಯಿಂದ ಆರೋಗ್ಯ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಅನೇಕ ಜನಪರ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದ ಅವರು ಮುಂದಿನ ದಿನಗಳಲ್ಲಿ ಈ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಇನ್ನೂ ಹೆಚ್ಚಿನ ಅರಿವನ್ನು, ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ಕಾರ್ಯವನ್ನು ವಿದ್ಯಾರ್ಥಿ ಸಂಘವು ಮಾಡುವಂತೆ ಸಲಹೆ ನೀಡಿದರು.ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ, ಕಾಲೇಜಿನ ಪ್ರಾಂಶುಪಾಲರಾದ ಡಾಟಟ. ಬಿ ಎಸ್ ಪ್ರಸಾದ್ ರವರು, ವಿದ್ಯಾರ್ಥಿಗಳ ಕಲೆ, ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ವೈದ್ಯಕೀಯ ಕ್ಷೇತ್ರದಲ್ಲಿ ವೈದ್ಯರ ಸಂವಹನ ಕೌಶಲ್ಯತೆಯ ಮಹತ್ವವನ್ನು ತಿಳಿಸಿದರು.ನೂತನ ವಿದ್ಯಾರ್ಥಿ ಸಂಘ “ಸಮನ್ವಯ-2023” ರ ಚೇರ್ಮೆನ್ ಡಾಟಟ. ಹರೀಶ್ ಕುಮಾರ್ ವಿ ಎಸ್ ಮತ್ತು ಸಹ ಚೇರ್ಮೆನ್ ಡಾಟಟ. ವೆಂಕಟೇಶ ಬಿ ಕೆ ಇವರಿಗೆ ಹಾಗೂ ವಿವಿಧ ಸಮಿತಿಗಳ ಚೇರ್ಮನ್, ಸಹ ಚೇರ್ಮನ್‌ಗಳಿಗೆ, ವಿದ್ಯಾರ್ಥಿ ಪದಾಧಿಕಾರಿಗಳಿಗೆ ಅಭಿನಂದಿಸಿದ ಇವರು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಕ್ರಿಯಾಶೀಲರಾಗಿ, ಜವಾಬ್ದಾರಿಯುತವಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲು ತಿಳಿಸಿದರು.