
ಕಲಬುರಗಿ:ಆ.16: ನಗರದ ರಾಮ ಮಂದಿರ ಸಮೀಪದ ರಾಜ ಮಹಲ್ ಬಡಾವಣೆಯ ಎಸ್.ಜಿ.ಕಿಡ್ಸ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಹಾಗೂ
ಎಂ.ಕೆ.ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಿ.ಎಸ್.ಮಾಲಿಪಾಟೀಲ್ ಧ್ವಜಾರೋಹಣ ನೆರವೇರಿಸಿದರು.ಶಾಲೆಯ ಮುಖ್ಯ ಶಿಕ್ಷಕ ಸಿದ್ರಾಮಯ್ಯ ಸ್ಥಾವರಮಠ ಅಧ್ಯಕ್ಷತೆ ವಹಿಸಿದ್ದ ಈ ಸಮಾರಂಭದಲ್ಲಿ ಶಿಕ್ಷಕರಾದ ಎಸ್.ಅಶ್ವಿನಿ, ಸುರೇಖಾ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.