ಎಸ್.ಜೆ.ಎಂ. ಕಾಲೇಜಿನ ಪ್ರಾಚಾರ್ಯ ನಿಧನ

ಚಿತ್ರದುರ್ಗ, ಮೇ – 30 ಎಸ್.ಜೆ.ಎಂ. ವಿದ್ಯಾಪೀಠದ ಅಡಿಯಲ್ಲಿ ಬರುವ ಹಾವೇರಿ ಎಸ್.ಜೆ.ಎಂ. ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ವಿಜಯಕುಮಾರ್ ಕೊರೋನಾ ಸೋಂಕಿನಿಂದ ಬಸವೇಶ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 9 ಗಂಟೆಗೆ ನಿಧನರಾದರು. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಸAಸ್ಕಾರವನ್ನು ಮೃತರ ಸ್ವಗ್ರಾಮ ಹೊಳಲ್ಕೆರೆ ತಾಲ್ಲೂಕು ಮz್ದೆÃರಿನಲ್ಲಿ ಮಧ್ಯಾಹ್ನ 3 ಗಂಟೆಗೆ ನೆರವೇರಿಸಿದರು.ಶ್ರೀಯುತರ ನಿಧನದ ಸುದ್ದಿ ಕೇಳಿ ಡಾ. ಶಿವಮೂರ್ತಿ ಮುರುಘಾ ಶರಣರು ತೀವ್ರ ಸಂತಾಪ ವ್ಯಕ್ತಪಡಿಸಿ, ಬಸವಾದಿ ಶರಣರು ದುಃಖತಪ್ತ ಕುಟುಂಬವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ. ಅಪಾರ ಬಂಧು-ಬಳಗವನ್ನು ಅಗಲಿರುವ ಶ್ರೀಯುತರ ನಿಧನದಿಂದ ತುಂಬಲಾರದ ನಷ್ಟವುಂಟು ಮಾಡಿದೆ ಎಂದು ಎಸ್.ಜೆ.ಎಂ. ವಿದ್ಯಾಪೀಠದ ಕರ‍್ಯದರ್ಶಿ ಎ.ಜೆ. ಪರಮಶಿವಯ್ಯ ಹಾಗು ಸಮಸ್ತ ಎಸ್.ಜೆ.ಎಂ. ನೌಕರ ಬಾಂಧವರು ಶೋಕ ವ್ಯಕ್ತಪಡಿಸಿದ್ದಾರೆ.