ಎಸ್.ಟಿ ಮೀಸಲಾತಿಗೆ ಆಗ್ರಹಿಸಿ ಅರೆಬೆತ್ತಲೆ ಚಳುವಳಿ

ರಾಯಚೂರು,ಮಾ.೧೪- ಪರಿಶಿಷ್ಟ ಪಂಗಡ ಮೀಸಲಾತಿಗೆ ಒತ್ತಾಯಿಸಿ ವಿಶ್ವಕರ್ಮ ಸಮಾಜದ ಯುವಕರಿಂದ ಮಾರ್ಚ್ ೧೮ ರಂದು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಅರೆಬೆತ್ತಲೆ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು. ವಿಶ್ವಕರ್ಮ ಅಭಿವೃದ್ದಿ ನಿಗಮ ನಾಮನಿರ್ದೇಶನ ಎಸ್.ರವೀಂದ್ರ ಕುಮಾರ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಪಿ ನಂಜುಂಡಿ ಅವರ ಹೋರಾಟದ ಫಲವಾಗಿ ಸರಕಾರ ಕುಲ ಶಾಸ್ತ್ರ ಅಧ್ಯಯನಕ್ಕೆ ಶಿಫಾರಸು ಮಾಡಿದೆ. ಆದಷ್ಟು ಬೇಗನೆ ಅಧ್ಯಯನ ಆಗಬೇಕು ಎಂದರು.
ಜಿಲ್ಲೆಯ ಎಲ್ಲಾ ತಾಲೂಕು ಹೋಬಳಿಗಳಿಂದ ಸುಮಾರು ಐದು ನೂರಕ್ಕೂ ಹೆಚ್ಚು ಜನ ಹಾಗೆ ಬೆತ್ತಲೆ ಚಳುವಳಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಿಲ್ಲೆಯ ಸಮಾಜದ ಹಿರಿಯ ಮುಖಂಡರು ಸಹ ಈ ವಿನೂತನ ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದರು.
ವಿಷಕರ್ಮ ಸಮುದಾಯದ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಈ ಹೋರಾಟಗಳನ್ನು ಮಾಡುವ ಪರಿಸ್ಥಿತಿ
ಎದುರಾಗಿದೆ.ಸಮಾಜವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ್ದೇವೆ. ಎಸ್ ಟಿ ಮೀಸಲಾತಿಯಿಂದ ಸಮಾಜಕ್ಕೆ ಸಮಾನತೆ ನ್ಯಾಯ ಸಿಗುತ್ತದೆ. ಈ ಹಿನ್ನೆಲೆಯಲ್ಲಿ ವಿಶ್ವಕರ್ಮ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶ್ರೀಕಾಂತ್,ಬ್ರಹ್ಮಯ್ಯ,ವೀರೇಶ ಜಲಾಲ ನಗರ,ಅನಿಲ್ ಕುಮಾರ ಇದ್ದರು.