ಎಸ್.ಡಿ.ಪಿ.ಐ ವತಿಯಿಂದ ಬೆಳಗಾವಿ ಚಲೋ- ಅಂಬೇಡ್ಕರ್ ಜಾಥಾ

ಸಂಜೆವಾಣಿ ವಾರ್ತೆ,
ವಿಜಯಪುರ ಡಿ.11:ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ), ಕರ್ನಾಟಕದ ವತಿಯಿಂದ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ – ಅಂಬೇಡ್ಕರ್ ಜಾಥಾ ಡಿಸೆಂಬರ್ 6 ರಂದು ಬೆಂಗಳೂರಿನ ವಿಧಾನಸೌಧದಿಂದ ಪ್ರಾರಂಭವಾಗಿದ್ದು ಡಿಸೆಂಬರ್ 11 ರಂದು ಬೆಳಗಾವಿಯ ಸುವರ್ಣಸೌಧದ ಬಳಿ ಸಮಾಪ್ತಿಯಾಗಲಿದೆ. ಇದರ ಭಾಗವಾಗಿ ಭಾನುವಾರ ನಗರÀದಲ್ಲಿ ರಾಜ್ಯ ನಾಯಕರ ಜೊತೆ ಸೇರಿ ನೂರಾರು ಕಾರ್ಯಕರ್ತರು ಜಾಥಾ ಮತ್ತು ಸಾರ್ವಜನಿಕರ ಸಭೆ ನಡೆಸಿದರು.
ಈ ಸಂದÀರ್ಭದಲ್ಲಿ ಜಾಥಾದ ಸಂಚಾಲಕ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ಅವರು ಮಾತನಾಡಿ, ಚುನಾವಣೆಗೂ ಮುಂಚೆ ಸಿದ್ದರಾಮಯ್ಯರವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲ ಅಧಿವೇಶನದಲ್ಲೇ 2ಬಿ ಮೀಸಲಾತಿಯನ್ನು ಜಾರಿ ಮಾಡುತ್ತೇವೆ. ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸುತ್ತೇವೆ ಎಂದು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದರು. ಅಧಿಕಾರಕ್ಕೆ ಬಂದ ನಂತರ ಸಿದ್ದರಾಮಯ್ಯ ಸರ್ಕಾರ ಜನರನ್ನು ವಂಚಿಸುತ್ತಿದೆ ಎಂದು ಆರೋಪಿಸಿದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಸಾಮಾಜಿಕ ನ್ಯಾಯದ ನೆಲೆಗಟ್ಟಿನಲ್ಲಿ, ನಾಡಿನ ಸಮಸ್ತ ಪ್ರಜೆಗಳಿಗೂ ಸಮಾನ ಅವಕಾಶ, ಹಕ್ಕು, ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯವಾಗಿರುತ್ತದೆ. ಎಲ್ಲರಿಗೂ ಸಮಾನ ಹಕ್ಕು, ಅಧಿಕಾರ ಮತ್ತು ಅವಕಾಶಗಳು ಸಿಗಬೇಕೆನ್ನುವ ಉದ್ದೇಶವನ್ನು ನಾವು ಹೊಂದಿದ್ದೇವೆ ಎಂದು ಎಲ್ಲ ಪಕ್ಷಗಳೂ ಹೇಳಿಕೊಳ್ಳುತ್ತವೆ. ಆದರೆ ಅವರ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದಾಗ ಶೋಷಿತ, ಅವಕಾಶ ವಂಚಿತ ಸಮುದಾಯಗಳಿಗೆ ದ್ರೋಹವೆಸಗುತ್ತಲೇ ಬಂದಿವೆ. ಕೂಡಲೇ ಒಳ ಮೀಸಲಾತಿ ಕುರಿತು ಸರಕಾರ ತೀರ್ಮಾನ ಕೈಗೊಳ್ಳಬೇಕು ಮತ್ತು ಸದಾಶಿವ ಆಯೋಗದ ವರದಿಯನ್ನು ಒಕ್ಕೂಟ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಕೋಶಾಧಿಕಾರಿ ಇಸ್ಹಾಕ್ ಹುಸೇನ್ (ಖಾಲಿದ್), ರಾಜ್ಯ ಸಮಿತಿ ಸದಸ್ಯರಾದ ಅಮ್ಜದ್ ಖಾನ್ ಮೈಸೂರು, ರಿಯಾಝ್ ಕಡಂಬು, ಯಮನಪ್ಪ ಗುಣದಾಳ, ರಮಜಾನ್ ಕಡಿವಾಳ್, ವಿಜಯಪುರÀ ಜಿಲ್ಲಾಧ್ಯಕ್ಷÀ ಅಥಾವುಲ್ಲಾ ದ್ರಾಕ್ಷಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಸಾರ್ ಅಹ್ಮದ್ ಮನಿಯಾರ, ವಿಜಯಪುರ ನಗರ ವಿಧಾನಸಭಾ ಅಧ್ಯಕ್ಷÀ ಉಮರಖಾನ ಪಠಾಣ, ಕಾರ್ಯದರ್ಶಿ ಜಮೀಲ ಮುಲ್ಲಾ, ಜಿಲ್ಲಾ ನಾಯಕರು, ವಿಧಾನಸಭಾ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.