ಎಸ್.ಬಿ.ಆರ್ ಕಾಲೇಜಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ

ಕಲಬುರಗಿ:ಏ.14:ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಸಂವಿಧಾನ ಶಿಲ್ಪಿ, ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣ ರೂಪದಲ್ಲಿ ಆಚರಿಸಲಾಯಿತು.

ಕಾಲೇಜಿನ ಮೇಲ್ವಿಚಾರಕರಾದ ಡಾ. ಶ್ರೀಶೈಲ ಹೊಗಾಡೆ ಇವರ ನೇತೃತ್ವದಲ್ಲಿ ಎಲ್ಲ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಸೇರಿ, ಸಂವಿಧಾನ ಶಿಲ್ಪಿ ಡಾ. ಭೀಮರಾವ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಮಾಲಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾದ ಕುಮಾರಿ: ಪ್ರಾಂಜಲ್ ಮಾತನಾಡುತ್ತಾ ‘ಡಾ. ಭೀಮರಾವ್ ಅಂಬೇಡ್ಕರ್ ಅವರು ಮಧ್ಯಪ್ರದೇಶದ ಮೋವ್‍ನಲ್ಲಿ 1891 ರ ಏಪ್ರಿಲ್ 14 ರಂದು ಜನಿಸಿದರು. ಅವರು 1908ರಲ್ಲಿ ಎಲ್ಫಿನ್ ಸ್ಟೋನ್ ಹೈಸ್ಕೂಲ್‍ನಿಂದ ಮೆಟ್ರಿಕ್ಯೂಲೇಶನ್ ಪಾಸ್ ಮಾಡಿದರು. ಉನ್ನತ ಶಿಕ್ಷಣವನ್ನು ನ್ಯೂಯಾರ್ಕ್ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು. 1927 ರ ಜೂನ್ 8 ರಂದು ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದರು. ಅವರು ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯ ಬಗ್ಗೆ ಹೋರಾಟವನ್ನು ಪ್ರಬಲವಾಗಿ ಆರಂಭಿಸಿದರು. 1920 ರಲ್ಲಿ ಬಿ. ಆರ್. ಅಂಬೇಡ್ಕರ್ ಅವರು ‘ಮೂಕನಾಯಕ’ ಎಂಬ ಪತ್ರಿಕೆಯನ್ನು ಆರಂಭಿಸಿದರು. ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ನೇಮಕಗೊಂಡಿದ್ದರು. ಅಂಬೇಂಡ್ಕರ್ ಅವರು ಸಂವಿಧಾನ ರಚನೆಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಬೃಹತ್ ಸಂವಿಧಾನಕ್ಕೆ ಅಪಾರ ಕೊಡುಗೆ, ಶ್ರಮ ಹಾಕಿದ್ದ ಇವರನ್ನು ಭಾರತೀಯ ಸಂವಿಧಾನ ಶಿಲ್ಪಿ ಎಂದೇ ಕರೆಯಲಾಗುತ್ತದೆ’ ಎಂದು ಹೇಳಿದಳು.
ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾದ ಕುಮಾರಿ: ವರ್ಷಿಣಿ ಮಾತನಾಡುತ್ತಾ “ ಅಂಬೇಡ್ಕರ್ ಅವರು ಪ್ರಪಂಚ ಕಂಡ ಮಹಾನ್ ನಾಯಕ, ಸಂವಿಧಾನ ಶಿಲ್ಪಿ, ಹೊಸ ಭಾರತದ ನಿರ್ಮಾತೃ, ಅಸ್ಪøಷ್ಯತೆ, ಅಸಮಾನತೆ ವಿರುದ್ಧ ಹೋರಾಡಿದ ಮಹಾನ್‍ಚೇತನ, ಮಹಿಳಾ ಸಮಾನತೆಯ ಹರಿಕಾರು, ಬಡತನ ಹಾಗೂ ಅಸ್ಪøಷ್ಯತೆ ನಡುವೆ ಬೆಳೆದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ನಮ್ಮ ದೇಶದ ಮಹಾನ್ ನಾಯಕರಲ್ಲಿ ಒಬ್ಬರಾಗಿದ್ದಾರೆ. ಸಂವಿಧಾನ ನಮ್ಮ ದೇಶದ ಪವಿತ್ರಗ್ರಂಥ. ಈ ಪವಿತ್ರಗ್ರಂಥದ ಮೂಲಕ ನಮ್ಮ ದೇಶದ ಪ್ರಜಾಪ್ರಭುತ್ವಕ್ಕೊಂದು ಅರ್ಥ ಕಲ್ಪಿಸಿಕೊಡುವ ವ್ಯವಸ್ಥೆಯನ್ನು ಜಾರಿಗೆ ತಂದರು. ದೇಶದ ನಾಗರಿಕರಲ್ಲಿ ಮೇಲು ಕೀಳೆನ್ನದೇ ಎಲ್ಲರೂ, ನಮ್ಮ ದೇಶದ ಸಂವಿಧಾನದ ಅಡಿಯಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರಣೆಯಾದವರು, ನಮ್ಮ ಹೆಮ್ಮೆಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ನಮ್ಮ ದೇಶದಲ್ಲಿನ ಅಸಮಾನತೆಯನ್ನು ಹೊಡೆದೋಡಿಸಿ, ಸಾಮಾಜಿಕ ಸಮಾನತೆಯನ್ನು ಜಾರಿಗೊಳಿಸುವ ಮೂಲಕ ನಮ್ಮೆಲ್ಲರಲ್ಲಿ ಸ್ಪೂರ್ತಿ ತುಂಬಿದ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಆದರ್ಶವನ್ನು ಎಲ್ಲರೂ ಮೈಗೂಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸುವ ಮೂಲಕ ಅವರ ಜನ್ಮ ದಿನವಾದ ಇಂದು ಅವರನ್ನು ಹೃದಯ ಪೂರ್ವಕವಾಗಿ ಸ್ಮರಿಸೋಣ. ಅಂಬೇಡ್ಕರ್‍ರವರು ಶ್ರೇಷ್ಠ ಆರ್ಥಿಕತಜ್ಞ, ಸಂವಿಧಾನತಜ್ಞ ಮತ್ತು ರಾಜಕೀಯಚಿಂತಕ. ಜಾತ್ಯಾತೀತ ಭಾರತದ ನಿರ್ಮಾಣ ಅಂಬೇಡ್ಕರ್ ಕನಸ್ಸಾಗಿತ್ತು. ಅಂಬೇಡ್ಕರ್ ಅವರ ಜೀವನ, ಹೋರಾಟ ಯುವ ಜನಾಂಗಕ್ಕೆ ಸ್ಪೂರ್ತಿ ಆಗಬೇಕು. ಅವರ ಕುರಿತು ಮತ್ತಷ್ಟು ಅಧ್ಯಯನ ಆಗಬೇಕು”ಎಂದು ಹೇಳಿದಳು.