ಎಸ್.ಬಿ.ಆರ್. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲಬುರಗಿ:ಜೂ.6:ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಶ್ವ ಪರಿಸರ ದಿನಾಚರಣೆ’ ಯನ್ನು ಅರ್ಥಪೂರ್ಣ ರೂಪದಲ್ಲಿ ಆಚರಿಸಲಾಯಿತು.
ಪ್ರಾಚಾರ್ಯರಾದ ಶ್ರೀ ಎನ್ ಎಸ್ ದೇವರಕಲ್ ಸರ್ ಅವರ ಮಾರ್ಗದರ್ಶನದಲ್ಲಿ, ಮೇಲ್ವಿಚಾರಕರಾದ ಡಾ. ಶ್ರೀಶೈಲ್ ಹೊಗಾಡೆಯವರು ಹಾಗೂ ಎಲ್ಲ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಸೇರಿ ಎಸ್.ಬಿ.ಆರ್ ಕ್ಯಾಂಪಸ್ ನಲ್ಲಿ ಅನೇಕ ಸಸಿಗಳನ್ನು ನೆಡುವ ಮೂಲಕ ‘ವಿಶ್ವ ಪರಿಸರ ದಿನಾಚರಣೆ’ಯನ್ನು ಅರ್ಥಪೂರ್ಣ ರೂಪದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿನಿ ಭೂಮಿಕಾ ‘ವಿಶ್ವ ಪರಿಸರ ದಿನಾಚರಣೆ’ಯ ಮಹತ್ವವನ್ನು ಕುರಿತು ಮಾತನಾಡಿದರು.
ಇಂದು ವಿಶ್ವ ಪರಿಸರ ದಿನ. ಪ್ರತಿ ವರ್ಷ ಜೂನ್ 5 ರಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವನ್ನು ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೆÇೀಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ. ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಭಿಸಿದೆ. ಆದರೆ ಇತ್ತಿಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನ ತಡೆಯುವುದಾಗಿದೆ. ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ. ಪ್ರತಿವರ್ಷ 143ಕ್ಕೂ ಹೆಚ್ಚು ದೇಶಗಳು ಈ ದಿನದಲ್ಲಿ ಭಾಗಿಯಾಗುತ್ತವೆ. ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ವಿವಿಧ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತದೆ. ಪ್ರಮುಖ ಸಂಸ್ಥೆಗಳು, ಎನ್‍ಜಿಒಗಳು, ಸಮುದಾಯಗಳು, ಸರ್ಕಾರಗಳು ವಿಶ್ವಾದ್ಯಂತ ಪರಿಸರ ದಿನವನ್ನು ವಿವಿಧ ರೀತಿಯಲ್ಲಿ ಆಚರಿಸುತ್ತವೆ. ಎಂದು ಹೇಳಿದರು.