ಎಸ್.ಬಿ.ಆರ್. ಕಾಲೇಜಿನಲ್ಲಿ ಶರಣ ಶ್ರೀ ಮಡಿವಾಳ ಮಾಚಿದೇವರ ಜಯಂತಿ

ಕಲಬುರಗಿ:ಫೆ.3:ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ-ಪೂರ್ವ ಕಾಲೇಜಿನಲ್ಲಿ ಶರಣ ಶ್ರೀ ಮಡಿವಾಳ ಮಾಚಿದೇವರ ಜಯಂತಿಯನ್ನು ಅರ್ಥಪೂರ್ಣ ರೂಪದಲ್ಲಿ ಆಚರಿಸಲಾಯಿತು.
ಕಾಲೇಜಿನ ಮೇಲ್ವಿಚಾರಕರಾದ ಡಾ. ಶ್ರೀಶೈಲ ಹೊಗಾಡೆ ಇವರ ನೇತೃತ್ವದಲ್ಲಿ ಎಲ್ಲ ವಿಭಾಗಗಳ ಮುಖ್ಯಸ್ಥರ, ಉಪನ್ಯಾಸಕರ, ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ, ಶರಣ ಶ್ರೀ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಹಾಗೂ ಮಾಲಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ನೆರವೇರಿಸಿದರು.
“ಮಡಿವಾಳ ಸಮುದಾಯದ ಮಹಾನ್ ಚೇತನ ಮಾಚಿದೇವರ ಮಾರ್ಗದರ್ಶನ ಸಮಾಜದ ಪ್ರತಿಯೊಂದು ವರ್ಗಕ್ಕೆ ಅವಶ್ಯಕವಾಗಿದೆ. ಮಾಚಿದೇವರು ಅನುಭವ ಮಂಟಪದಲ್ಲಿ ಸಮಾಜದ ಏಳ್ಗೆಗೆ ಶ್ರಮಿಸಿದವರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಜೀವನವನ್ನು ಮುಡಿಪಿಟ್ಟಿದ್ದರು. ಕಾಯಕ ನಿμÉ್ಠ, ದಾಸೋಹದಂತಹ ಮೌಲ್ಯಯುತವಾದ ಕಾಣಿಕೆ ನೀಡಿದ್ದು, 12ನೇ ಶತಮಾನದ ಕಾಲದಲ್ಲಿ. ಇಂತಹ ಶರಣರು ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಅಳವಡಿಸಿಳ್ಳಬೇಕು. ಮಡಿವಾಳ ಮಾಚಿದೇವರು ಬದುಕಿನ ಸಾತ್ವಿಕತೆ ನೀಡಿ ಸತ್ಯ, ಶುದ್ಧ ಕಾಯಕ ಕೊಟ್ಟವರಾಗಿದ್ದಾರೆ. ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯ ಎಂದು ತೋರಿಸಿಕೊಟ್ಟಿದ್ದಾರೆ. ಮಾಚಿದೇವರು 354 ವಚನಗಳನ್ನು ಬರೆದಿದ್ದಾರೆ. ಮಡಿವಾಳ ಮಾಚಿದೇವರು ವೀರ ನಿμÉ್ಠಯುಳ್ಳ ಶರಣರಾಗಿದ್ದರು. ಅವರು ಭಾರತದ ಕರ್ನಾಟಕದ ಬಿಜಾಪುರ ಜಿಲ್ಲೆಯ ದೇವರ ಹಿಪ್ಪರಗಿಯಲ್ಲಿ ಜನಿಸಿದರು. ವಿಶ್ವಗುರು ಬಸವೇಶ್ವರರ ಸಮಕಾಲೀನ ಶರಣರು. ಶರಣರ ಬಟ್ಟೆ ಒಗೆಯುವುದು ಅವರ ವೃತ್ತಿ (ಕಾಯಕ). ಕಲ್ಯಾಣದಲ್ಲಿ ಕೆಲಸ ಮಾಡುತ್ತಿದ್ದರು. ನುಲಿಯ ಚಂದಯ್ಯನಿಗೆ ಇಷ್ಟಲಿಂಗದ ಮಹತ್ವವನ್ನು ತಿಳಿಸಿಕೊಟ್ಟರು. ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲಿ ವಚನ ಸಾಹಿತ್ಯವನ್ನು ನಾಶಪಡಿಸಲು ಉದ್ದೇಶಿಸಿರುವ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡಿದರು. ಶರಣರು ಕಲ್ಯಾಣದಿಂದ ಉಳುವಿಗೆ ಹೋದಾಗ ಶರಣರು ಬರೆದ ವಚನಗಳ ಹಸ್ತಪ್ರತಿಗಳನ್ನು ರಕ್ಷಿಸಲು ರಾಜ ಬಿಜ್ಜಳನ ಸೈನ್ಯದ ವಿರುದ್ಧ ವೀರಾವೇಶದಿಂದ ಹೋರಾಡಿದರು ಮತ್ತು ಈ ಶರಣ ಸಾಹಿತ್ಯವನ್ನು ಸುಡುವ ಉದ್ದೇಶದಿಂದ ಸೇನೆಯ ಹಿಡಿತದಿಂದ ಕಿತ್ತುಕೊಂಡರು. ಬೆಳಗಾವಿ ಜಿಲ್ಲೆಯ ಮುರಗೋಡು ಸಮೀಪದ ಕರಿಮನೆ ಎಂಬಲ್ಲಿ ಉಳವಿಗೆ ತೆರಳುವ ಮಾರ್ಗ ಮಧ್ಯೆ ಮೃತಪಟ್ಟರು’ ಎಂದು ಸ್ಮರಿಸಲಾಯಿತು.