ಎಸ್.ಬಿ.ಆರ್.ಕಾಲೇಜಿನ ಪೂರ್ವಿಕಾಳಿಗೆ ತೃತೀಯ ಬಹುಮಾನ

ಕಲಬುರಗಿ,ಸೆ.18:ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿಯಲ್ಲಿ ಅಭ್ಯಾಸ ಮಾಡುತ್ತಿರುವ ಕುಮಾರಿ: ಪೂರ್ವಿಕಾ ತಂದೆ ಚಂದ್ರಕಾಂತ. ಅವರು ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡು ಸಾಧನೆ ಮೆರೆದಿದ್ದಾಳೆ.
ಕಲಬುರಗಿ ಮಹಾನಗರ ಪಾಲಿಕೆಯ ವತಿಯಿಂದ ಟೌನ್‍ಹಾಲ್‍ನಲ್ಲಿ ಆಯೋಜಿಸಲಾದ ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಹಾಗೂ ಸ್ವಚ್ಛ ಅಮೃತ ಮಹೂತ್ಸವದ ಅಂಗವಾಗಿ ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗಿತ್ತು. ಅದರಲ್ಲಿ ದಿನಾಂಕ: 11-09-2022 ರಂದು ಬೆಳಿಗ್ಗೆ 8:00 ಗಂಟೆಗೆ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯಲ್ಲಿ ಎಸ್.ಬಿ.ಆರ್.ನ ಕುಮಾರಿ: ಪೂರ್ವಿಕಾ ತಂದೆ ಚಂದ್ರಕಾಂತ. ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾಳೆ. ಈ ಬಹುಮಾನವು ರೂ. 5000/ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಈ ಸ್ಪರ್ಧೆಗಳಲ್ಲಿ ಕಲಬುರಗಿ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮ ನೋಡುಗರ ಕಣ್ಮನ ಸೆಳೆಯಿತು.
ಪೂಜ್ಯ ಡಾ. ಶರಣಬಸವಪ್ಪ ಅಪ್ಪ, ಅಧ್ಯಕ್ಷರು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘ, ಕಲಬುರಗಿ. ಇವರು ಹಾಗೂ ಮಾತೋಶ್ರಿ ಡಾ. ದಾಕ್ಷಾಯಿಣಿ ಅವ್ವಾಜಿ ಚೇರಪರ್ಸನ್, ಶರಣಬಸವೇಶ್ವರ ವಿದ್ಯಾವರ್ಧಕ ಸಂಘ, ಕಲಬುರಗಿ ಇವರು ಮತ್ತು ಶ್ರಿ ಬಸವರಾಜ ದೇಶಮುಖ, ಕಾರ್ಯದರ್ಶಿಗಳು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘ, ಕಲಬುರಗಿ ಇವರು ವಿದ್ಯಾರ್ಥಿನಿಯ ಈ ಸಾಧನೆಯನ್ನು ಮೆಚ್ಚಿ ಅಭಿನಂದನೆ ಸಲ್ಲಿಸಿದ್ದಾರೆ.