
ಕಲಬುರಗಿ,ಸೆ.9:ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಬಳ್ಳಾರಿ ವತಿಯಿಂದ, ಬಳ್ಳಾರಿಯಲ್ಲಿ ನಡೆದ ವಿಭಾಗ ಮಟ್ಟದ ಹಾಕಿ ಕ್ರೀಡಾಕೂಟದಲ್ಲ್ಲಿ ಕಲಬುರಗಿಯ ಎಸ್.ಬಿ.ಆರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಯಾದ ಕುಮಾರ: ಆಯುಷ್ ಎಂ ಪಾಟೀಲ ಈತನು ಕಲಬುರಗಿ ಜಿಲ್ಲಾ ತಂಡವನ್ನು ಪ್ರತಿನಿಧಿಸುವುದರ ಮೂಲಕ ಕ್ರೀಡಾಕೂಟದಲ್ಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿಭಾಗ ಮಟ್ಟಕ್ಕೆ ಆಯ್ಕೆ
ಇತ್ತೀಚೆಗೆ ಕಲಬುರಗಿಯ ಎನ್‍ವ್ಹಿ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರಿಕೇಟ್ ಪಂದ್ಯಾವಳಿಯಲ್ಲಿ ಕುಮಾರ: ಪ್ರೀತಮ್ ಎಲ್. ಬೇಲೂರ ಹಾಗೂ ನಿಹಾಲ್ ಎಸ್. ಅತನೂರ ಈ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಿ ವಿಭಾಗ ಮಟ್ಟದ ಕ್ರಿಕೇಟ್ ತಂಡಕ್ಕೆ ಆಯ್ಕೆಯಾಗಿರುತ್ತಾರೆ.
ಈ ಎಲ್ಲಾ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷರಾದ ವಿದ್ಯಾಭಂಡಾರಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರು ಹಾಗೂ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಣಿ ಅವ್ವಜಿ ಹಾಗೂ 9ನೇ ಪೀಠಾಧಿಪತಿಗಳಾದ ಪೂಜ್ಯ ಚಿ. ದೊಡ್ಡಪ್ಪ ಅಪ್ಪ ಅವರು ಹರ್ಷ ವ್ಯಕ್ತಪಡಿಸಿದರು, ಹಾಗೂ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ. ಬಸವರಾಜ ದೇಶಮುಖ ಅವರು ಕ್ರೀಡಾಪಟುಗಳಿಗೆ ಅಭಿನಂದಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಚಾರ್ಯರಾದ ಶ್ರೀ ಎನ್.ಎಸ್. ದೇವರಕಲ್ ಅವರು ಮಕ್ಕಳನ್ನುದ್ದೇಶಿಸಿ ಶಾಲೆಯ ಕೀರ್ತಿ ಪತಾಕೆಯನ್ನು ರಾಷ್ಟ್ರ ಮಟ್ಟದವರೆಗೆ ಕೊಂಡೊಯ್ಯಿರಿ ಎಂದು ಅಭಿನಂದಿಸಿ ಹರಸಿದರು. ಮಕ್ಕಳ ಈ ಸಾಧನೆಗೆ ಶಾಲೆಯ ಎಲ್ಲ ಶಿಕ್ಷಕರು ಹರ್ಷ ವ್ಯಕ್ತಪಡಿಸಿದರು.