ಎಸ್. ಬಿ. ಆರ್. ಶಾಲೆಯಲ್ಲಿ ರಾಷ್ಟ್ರಿಯ ಯುವ ದಿನಾಚರಣೆ

ಕಲಬುರಗಿ:ಜ.13:ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ಎಸ್.ಬಿ.ಆರ್ ಶಾಲೆಯಲ್ಲಿ ರಾಷ್ಟ್ರಿಯ ಯುವ ದಿನಾಚರಣೆ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಅದರ ಭಾಗವಾಗಿ ಮೊದಲನೆಯ ದಿನ ಪ್ರೌಢ ಶಾಲೆಯ ಸುಮಾರು 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸ್ವಾಮಿ ಮಹೇಶ್ವರಾನಂದ ಮಹಾರಾಜ ಅವರು (ಸ್ವಾಮಿ ವಿವೇಕಾನಂದ ಆಶ್ರಮ, ಕಲಬುರಗಿ) ಸ್ವಾಮಿ ವಿವೇಕಾನಂದರ ಜೀವನ ಮತ್ತು ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಎಸ್.ಬಿ.ಆರ್. ಪಿ.ಯು. ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಕಾಂತ ಪಾಟೀಲರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಜೀವನ ಅವರ ಸಾಧನೆಗಳ ಕುರಿತು ಮಾತನಾಡಿದರು.

ಪ್ರಾಚಾರ್ಯರಾದ ಶ್ರೀ ಎನ್. ಎಸ್. ದೇವರಕಲ್ ಸರ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಜರುಗಿತು.