ಎಸ್.ಬಿ.ಐ. ಬ್ಯಾಂಕ್ ಕಟ್ಟಡಕ್ಕೆ ಹೊತ್ತಿಕೊಂಡ ಬೆಂಕಿ!


ಶಿವಮೊಗ್ಗ, ನ. 28: ಶಿವಮೊಗ್ಗ ನಗರ ಹೊರವಲಯ ವಿದ್ಯಾನಗರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್.ಬಿ.ಐ.) ಶಾಖೆಯಲ್ಲಿ ಭಾನುವಾರ ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದೆ. ಬ್ಯಾಂಕ್ ಕಟ್ಟಡದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳವು ಕಟ್ಟಡಕ್ಕೆ ಹೊತ್ತಿದ್ದ ಬೆಂಕಿ ನಂದಿಸಿದೆ. ಭಾನುವಾರ ರಜೆಯಿದ್ದ ಕಾರಣ ಯಾವಾಗ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬುವುದು ಸ್ಪಷ್ಟವಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ಯಾಂಕ್ ಅಧಿಕಾರಿ-ಸಿಬ್ಬಂದಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.ಸುರಕ್ಷಿತ: ಬೆಂಕಿ ಅವಘಡದಲ್ಲಿ ಸ್ಟ್ರಾಂಗ್ ರೂಂಗೆ ಯಾವುದೇ ಧಕ್ಕೆಯಾಗಿಲ್ಲ. ಹಣ, ಚಿನ್ನಾಭರಣ ಮತ್ತಿತರ ಮಹತ್ವದ ದಾಖಲಾತಿಗಳಿದ್ದ ಲಾಕರ್ ಸುರಕ್ಷಿತವಾಗಿದೆ ಎಂದು ಬ್ಯಾಂಕ್ ಮೂಲಗಳು ಹೇಳಿವೆ.