
ಕಲಬುರಗಿ,ಆ 14: ನ್ಯಾಕ್‍ನಿಂದ ಎ ಗ್ರೇಡ್ ಮಾನ್ಯತೆ ಪಡೆದಿರುವ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ , ಮೊದಲ ಪ್ರಯತ್ನದಲ್ಲಿ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆಯಾದ ವೈಷ್ಣವಿ ಆರ್ ಗೌಳಿ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಮಾತನಾಡಿ, ಕಾಲೇಜು ತನ್ನ 62 ವರ್ಷಗಳ ಅಸ್ತಿತ್ವದಲ್ಲಿ ಶ್ರೀಮಂತ ಪರಂಪರೆಯನ್ನು ಎತ್ತಿ ತೋರಿಸಿದೆ.ಸಿಎ ಅಂತಹ ಕೋಚಿಂಗ್ ತರಗತಿಗಳು ಇಲ್ಲದಿದ್ದಾಗ ಇದು 60 ಕ್ಕೂ ಹೆಚ್ಚು ಚಾರ್ಟರ್ಡ್ ಅಕೌಂಟೆಂಟ್‍ರನ್ನು ಸಿದ್ಧಮಾಡಿದೆ. ಈಗ ನಮ್ಮ ಸಂಸ್ಥೆಯಲ್ಲಿ ಸಿಎ ಫೌಂಡೇಶನ್ ಕೋರ್ಸ್ ಆರಂಭಿಸುವ ಮೂಲಕ ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿಸಲು ನಮ್ಮ ಅಧ್ಯಕ್ಷರಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಮತ್ತು ಅಧ್ಯಕ್ಷೆ ಮಾತೋಶ್ರೀ ಡಾ.ದಾಕ್ಷಾಯಣಿ ಎಸ್.ಅಪ್ಪಾ ಅವರು ಆಶಯ ವ್ಯಕ್ತಪಡಿಸಿದ್ದಾರೆ ಎಂದರು.
ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಶಿವಾನಂದ ಪಾಟೀಲ, (ಜನರಲ್ ಮ್ಯಾನೇಜರ್, ಕಾನೂನು ಮತ್ತು ಸಂಪರ್ಕ, ಓರಿಯಂಟ್ ಸಿಮೆಂಟ್ಸ್ ಲಿಮಿಟೆಡ್, ಚಿತಾಪುರ)ಗೌರವ ಅತಿಥಿಗಳಾಗಿದ್ದರು. .
ಕಾಲೇಜಿನ ಪ್ರಾಂಶುಪಾಲ ಡಾ.ದಶರತ್ ಮೇತ್ರಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಸಿಎ ಫೌಂಡೇಶನ್ ಕೋರ್ಸ್‍ನ ನಿರ್ದೇಶಕಿ ಡಾ.ಇಂದಿರಾ ಶೆಟಕಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಗದೇವಿ ಗೋಳೇದ್ ಪ್ರಾರ್ಥನಾ ಗೀತೆ ಹಾಡಿದರು. ಗ್ರಂಥಪಾಲಕ ವೀರೇಶ ಹಿರೇಮಠ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.