ಎಸ್.ಸಿ. ಬಸವರಾಜುಗೆ ವಿಧಾನ ಪರಿಷತ್ ಟಿಕೆಟ್ ನೀಡಲು ಹೊಂಗನೂರು ಚಂದ್ರು ಮನವಿ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಮೇ 27- ನಾಯಕ ಸಮಾಜದ ಹಿರಿಯ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾಗಿರುವ ಪ್ರಭಾವಿ ಮುಖಂಡ ಎಸ್.ಸಿ. ಬಸವರಾಜು ಅವರಿಗೆ ವಿಧಾನ ಪರಿಷತ್ ಟಿಕೆಟ್ ನೀಡಬೇಕೆಂದು ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷರು ಹಾಗೂ ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊಂಗನೂರು ಎಚ್.ವಿ. ಚಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದಾರೆ.
1987ರಿಂದ ಸಕ್ರಿಯ ರಾಜಕಾರಣದಲ್ಲಿರುವ ಎಚ್.ಸಿ. ಬಸವರಾಜು ಅವರು ಮೈಸೂರು ಜಿ.ಪಂ. ಅಧ್ಯಕ್ಷರಾಗಿ, ಮೂರು ಬಾರಿ ಜಿ.ಪಂ. ಸದಸ್ಯರಾಗಿ ಉತ್ತಮ ಸೇವೆ ಸಲ್ಲಿಸುವ ಜೊತೆಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚು ಚಿರ ಪರಿಚಿತರು, 1987ರÀಲ್ಲಿ ಪ್ರಥಮ ಜಿಲ್ಲಾ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ರಾಜಕೀಯ ಜೊತೆಗೆ ಸಹಕಾರ ಹಾಗೂ ವಿವಿಧ ಕ್ಷೇತ್ರಗಳÀಲ್ಲಿ ಸೇವೆ ಸಲ್ಲಿಸುವ ಮೂಲಕ ಮೈಸೂರು- ಚಾಮರಾಜನಗರ ಪ್ರಾಂತ್ಯದಲ್ಲಿ ನಾಯಕ ಸಮಾಜದ ಅತ್ಯಂತ ಪ್ರಭಾವಿ ನಾಯಕರಾಗಿದ್ದಾರೆ.
ಕಳೆದ 2013-18ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರ ಅವಧಿಯಲ್ಲಿ ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿ, ಸರ್ಕಾರ ಹಾಗೂ ಸಮುದಾಯಕ್ಕೆ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡಿ ರಾಜ್ಯಾದ್ಯಂತ ಬಸವರಾಜು ಅವರು ಜನಪ್ರಿಯತೆಯನ್ನು ಹೊಂದಿದ್ದಾರೆ. ಜೊತೆಗೆ ಹಲವಾರು ವರ್ಷಗಳಿಂದ ಪಕ್ಷÀ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿ, ಈ ಭಾಗದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ತಮ್ಮದೇ ಅದ ಸೇವೆ ಸಲ್ಲಿದ್ದಾರೆ. ಎರಡು ಬಾರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಯಾಗಿ ತಳಮಟ್ಟದಿಂದ ಪಕ್ಷವನ್ನು ಸಂಘಟನೆ ಮಾಡಿದ್ದಾರೆ. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ನಾಯಕ ಜನಾಂಗ ಪ್ರಭಾವಿ ಮುಖಂಡರಾಗಿರುವ ಬಸವರಾಜು ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ಸ್ಥಾನ ನೀಡಿದರೆ ಈ ಭಾಗದಲ್ಲಿ ಹೆಚ್ಚು ಅನುಕೂಲವಾಗಲಿದೆ. ಮುಂಬರುವ ಜಿ.ಪಂ. ತಾ.ಪಂ ಚುನಾವಣೆಗಳು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ನಾಯಕ ಸಮುದಾಯದ ಮತಗಳು ಗಣನೀಯ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬರುವ ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಇನ್ನು ಹೆಚ್ಚಿನ ರೀತಿಯಲ್ಲಿ ಬಲಿಷ್ಠಗೊಳಿಸಲು ಸಹಕಾರಿಯಾಗುತ್ತದೆ.
ಹಿಂದಿನ ಸರ್ಕಾರಗಳ ಅವಧಿಯಲ್ಲಿ ವಿಧಾನ ಪರಿಷತ್‍ಗೆ ನಾಯಕ ಸಮಾಜದ ಚಿಕ್ಕಮಾಧು ಅವರು ಜೆಡಿಎಸ್‍ನಿಂದ ಸಿದ್ದರಾಜು ಅವರು ಬಿಜೆಪಿಯಿಂದ ನಾಮಕರಣವಾಗಿದ್ದರು.ಈಗ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಬಸವರಾಜು ಅವರಿಗೆ ಅವಕಾಶ ಮಾಡಿಕೊಡಿ ಎಂದು ಚಂದ್ರು ಮನವಿ ಮಾಡಿದ್ದಾರೆ.
ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ. ವೆಂಕಟೇಶ್ ಅವರು, ಸಚಿವರಾದ ಸತೀಶ್ ಚಾರಕಿಹೊಳಿ, ಕೆ.ಎಲ್. ರಾಜಣ್ಣ ಅವರು ಹಾಗೂ ಎರಡು ಜಿಲ್ಲೆಯ ಶಾಸಕರುಗಳು, ಎಸ್.ಸಿ. ಬಸವರಾಜು ಅವರಿಗೆ ಅವಕಾಶ ಮಾಡಿಕೊಟ್ಟರೆ ಹೆಚ್ಚಿನ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷರು ಹಾಗೂ ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊಂಗನೂರು ಎಚ್.ವಿ. ಚಂದ್ರು ಮನವಿ ಮಾಡಿಕೊಂಡಿದ್ದಾರೆ.