ಎ.ದೇವದಾಸ್ ಅವರ ಪರವಾಗಿ ಬಿರುಸಿನ ಪ್ರಚಾರ


ಸಂಜೆವಾಣಿ ವಾರ್ತೆ
ಕುರುಗೋಡು:ಏ.17ಕಂಪ್ಲಿ ವಿಧಾನಸಭಾ ಕ್ಷೇತ್ರದ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಯಾದ ಎ.ದೇವದಾಸ್ ಅವರ ಪರವಾಗಿ ಕಲ್ಲುಕಂಭ, ಕೆರಿಕೆರಿ, ವದ್ದಟ್ಟಿ, ಬಾದನಹಟ್ಟಿ ಮತ್ತು ಲಕ್ಷ್ಮೀಪುರ ಗ್ರಾಮಗಳಲ್ಲಿ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರ ಸ್ಥಳಕ್ಕೆ ತೆರಳಿ ಬಿರುಸಿನ ಪ್ರಚಾರ ನಡೆಸಿದರು.
ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಕಾಮ್ರೇಡ್ ಗೋವಿಂದ್ ಮಾತನಾಡಿದ ಅವರು, ಉದ್ಯೋಗ ಖಾತ್ರಿ ಯೋಜನೆಯಲ್ಲಿ 100 ದಿನಗಳ ಕಾಲ ಕೂಲಿ ಕಾರ್ಮಿಕರಿಗೆ ಕೆಲಸ ಕೊಡಿಸಿ , ಸರಿಯಾಗಿ ಕೂಲಿ ಬರುವಂತೆ ಯಶಸ್ವಿ ಹೋರಾಟ ನಡೆದದ್ದು ಎ.ದೇವದಾಸ್ ಅವರ ನೇತೃತ್ವದಲ್ಲಿ ನಡೆದ ಹೋರಾಟದಿಂದ ಫಲವಾಗಿದೆ.
ರೈತರಿಗೆ ಬೆಳೆ ನಷ್ಟ ಪರಿಹಾರ, ಬೆಳೆಗಳಿಗೆ ಬೆಂಬಲ ಬೆಲೆ ಮತ್ತು ಕಾಲುವೆಗೆ ನೀರು ಬಿಡಬೇಕೆಂದು ಆಗ್ರಹಿಸಿ ಹಲವಾರು ಹೋರಾಟಗಳನ್ನು ಮಾಡಿದ್ದಾರೆ. ಹೀಗೆ ಮುಂದಿನ ದಿನಗಳಲ್ಲಿ  ವಿಧಾನಸೌಧದಲ್ಲೂ ನಿಮ್ಮ ಪರವಾಗಿ ಧ್ವನಿ ಎತ್ತಲು ಎ.ದೇವದಾಸ್ ಅವರನ್ನು ಗೆಲ್ಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಪಕ್ಷದ ಸದಸ್ಯರಾದ ಜಗದೀಶ್, ರಾಜಾ, ವಿಜಯಲಕ್ಷ್ಮಿ , ಪಂಪಾಪತಿ ಹೊಸಪೇಟೆ, ವಿದ್ಯಾ, ಶಾಂತಿ ಪಾಲಾಕ್ಷ, ಪಂಪಾಪತಿ, ಬಸವರಾಜ್ ಇತರರು ಉಪಸ್ಥಿತರಿದ್ದರು.