ಎ.೨೮ರಿಂದ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್‌ ಸಂಚಾರ ಸ್ಥಗಿತ

ಮಂಗಳೂರು, ಎ.2೭- ಕೋರೋನ 2ನೆ ಅಲೆಯನ್ನು ನಿಗ್ರಹಿಸುವ ಸಲುವಾಗಿ ಎ.27ರ ರಾತ್ರಿ 9ರಿಂದ ಎರಡು ವಾರಗಳ ಕಾಲ (ಬೆಳಗ್ಗೆ 6ರಿಂದ 10ರವರೆಗೆ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ನೀಡಲಾಗಿದೆ) ಕೋವಿಡ್ ಕರ್ಫ್ಯೂ ವಿಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಎ.28ರ ಬುಧವಾರದಿಂದ ದ.ಕ.ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ.

ಮಂಗಳವಾರ ಮುಂಜಾನೆಯಿಂದ ರಾತ್ರಿ 9ರವರೆಗೆ ಬಸ್‌ಗಳು ಎಂದಿನಂತೆ ಸಂಚರಿಸಲಿವೆ. ಆ ಬಳಿಕ ಸರಕಾರದ ಮುಂದಿನ ಆದೇಶದವರೆಗೆ ಸಂಚಾರ ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು ದಿಲ್‌ರಾಜ್ ಆಳ್ವ ಪ್ರತಿಕ್ರಿಯಿಸಿದ್ದಾರೆ.