ಏಕದಿನ ಕ್ರಿಕೆಟ್‌ನಲ್ಲಿ ಕಿಂಗ್‌ ಕೊಹ್ಲಿ ಸವ್ಯಸಾಚಿ 50 ನೇ ಶತಕ ದಾಖಲು, ಸಚಿನ್ ಅಭಿನಂದನೆ

ಮುಂಬೈ, ನ.15- ಶತಕಗಳ ಅರ್ಧಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಭಾರತದ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ. ಇದರೊಂದಿಗೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ 49 ಶತಕಗಳ ದಾಖಲೆಯನ್ನು ಕೊಹ್ಲಿ ಮುರಿದು ಈ ಅಭೂತಪೂರ್ವ ಸಾಧನೆ ಮಾಡಿದ್ದಾರೆ.
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ದದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ
ಕೊಹ್ಲಿ 50 ನೇ ಶತಕ ಬಾರಿಸುತ್ತಿದ್ದಂತೆ ಕ್ರೀಡಗಣದದಲ್ಲಿ ಜಮಾಯಿಸಿದ್ದ ಸಾವಿರಾರು ಪ್ರೇಕ್ಷಕರು ಚಪ್ಪಾಳೆ, ಹರ್ಷೋದ್ಗಾರದ ಮೂಲಕ ಅಭಿನಂದನೆ‌ ಸಲ್ಲಿಸಿದರು.
ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸುತ್ತಿದ್ದ ಸಚಿನ್ ತೆಂಡೂಲ್ಕರ್ ಎದ್ದು ನಿಂತು ಚಪ್ಪಾಳೆ ತಟ್ಟಿ ಕೊಹ್ಲಿಗೆ ಅಭಿನಂದನೆ ಸಲ್ಲಿಸಿದರು. ಬಿಸಿಸಿಐ ಕಾರ್ಯದರ್ಶಿ ಜೈ ಶಾ, ಪತ್ನಿ ಅನುಷ್ಕಾ ಶರ್ಮಾ ನಗೆಬೀರುತ್ತಾ ಕೊಹ್ಲಿಯನ್ನು ಅಭಿನಂದಿಸಿದರು.
ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ವಿರಾಟ್‌‌‌ ಕೊಹ್ಲಿ 49ನೇ ಶತಕ ಬಾರಿಸಿ ಸಚಿನ್ ದಾಖಲೆಯನ್ನು ಸರಿಗಟ್ಟಿದ್ದರು. 35 ನೇ ಹುಟ್ಡುಹಬ್ಬದ ಸಂದರ್ಭದಲ್ಲೇ 49 ನೇ ಶತಕ ಸಿಡಿಸಿದ್ದರು ಕೊಹ್ಲಿ.
ಸಚಿನ್‌ ತೆಂಡೂಲ್ಕರ್‌ 452 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಿಡಿಸಿದ್ದರೆ, ಕೊಹ್ಲಿ ಕೇವಲ 277 ಇನ್ನಿಂಗ್ಸ್‌ಗಳಲ್ಲೇ ಈ ಸಾಧನೆ ಮಾಡಿ ಸೈ ಎನಿಸಿಕೊಂಡಿದ್ದರು. ಇಂದು ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ 106 ಎಸೆತಗಳಲ್ಲಿ 8 ಬೌಂಡರಿ 1 ಸಿಕ್ಸರ್‌ನೊಂದಿಗೆ ಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದಾರೆ.
ರಿಕಿ ದಾಖಲೆ ಮುರಿದ ಕೊಹ್ಲಿಏಕದಿನ ಕ್ರಿಕೆಟ್ ಪಂದ್ಯದಲ್ಲಿ ಆತಿ ಹೆಚ್ಚು ರನ್ ಬಾರಿಸಿ ಬ್ಯಾಟರ್ ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯವರು ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ದಾಖಲೆಯನ್ನು ಮುರಿದಿದ್ದಾರೆ.
ಏಕದಿನ ಪಂದ್ಯದಲ್ಲಿ ಕೊಹ್ಲಿ 13,705 ರನ್ ಗಳನ್ನು ಬಾರಿಸಿ, ಪಾಂಟಿಂಗ್ ದಾಖಲೆಯನ್ನು ಮುರಿದಿದ್ದಾರೆ.

ಹೆಚ್ಚು ರನ್ ಗಳಿಸಿದವರು

ಸಚಿನ್ ತೆಂಡೂಲ್ಕರ್ 18,426
ಕುಮಾರ ಸಂಗಕ್ಕಾರ 14,234
ವಿರಾಟ್ ಕೊಹ್ಕಿ 13,705
ರಿಕಿ ಪಾಂಟಿಂಗ್ 13,704
ಸನತ್ ಜಯಸೂರ್ಯ13,430