ಏಳು ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು, ಜ 13- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ದಾರೆ. ಈ ಮೂಲಕ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ ಸಚಿವರಿಗೆ ಎಳ್ಳು ಬೆಲ್ಲವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ‌ಸಂಪುಟ ದರ್ಜೆ ಸಚಿವರಾಗಿ ಉಮೇಶ್ ಕತ್ತಿ, ಮೂರನೇ ಬಾರಿ‌ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಸಚಿಚರಾಗಿ ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್. ಶಂಕರ್, ಸಿ.ಪಿ.ಯೋಗೀಶ್ವರ್, .ಎಸ್.ಅಂಗಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ವಿ.ಆರ್.ವಾಲ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಹೊರಗಡೆ ಜಮಾಯಿಸಿದ್ದ ಸಚಿವರ ಬೆಂಬಲಿಗರು ಜಯಕಾರ ಹಾಕಿದರು.
ಆರು ಮಂದಿ ದೇವರ ಹೆಸರಿನಲ್ಲಿ ಪ್ತಮಾಣವಚನ ಸ್ವೀಕರಿಸಿದರೆ ಮುರುಗೇಶ್ ನಿರಾಣೆ ರೈತರು ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು‌.
ಸಂಪುಟ ವಿಸ್ತರಣೆಯಲ್ಲಿ ಇಬ್ಬರು ವೀರಶೈವ, ಇಬ್ಬರು ಕುರುಬ , ಇಬ್ಬರು ಪರಿಶಿಷ್ಡ ಜಾತಿ ಮತ್ತು ಹಾಗೂ ಒಕ್ಜಲಿಗ ಸಮುದಾಯಕ್ಕೆ‌ ಸೇರಿದವರಿಗೆ ಅವಕಾಶ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಣೆ ಹಾಕಿದ್ದಾರೆ.
ಪಕ್ಷ ಅಧಿಕಾರಕ್ಕೆ ಬರಲು‌ ಸಹಕರಿಸಿದವರಿಗೆ ಹಾಗೂ ಕೊಟ್ಟ ಮಾತು ಉಳಿಸಿಕೊಳ್ಳಲು ಸಿಎಂ ಸಂಪುಟ ವಿಸ್ತರಣೆ ಮಾಡಿದ್ದಾರೆ.
ಅಲ್ಲದೆ ಏಳು ಮಂದಿ ಸಚಿವರ ಪೈಕಿ ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ, ಸಿ.ಪಿ.ಯೋಗೀಶ್ವರ್, ಶಂಕರ್ ಅವರಿಗೆ ಮಂತ್ರಿಪಟ್ಟ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಆರ್. ಅರ್. ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ ಸಚಿವ ಸ್ಥಾನ ತಪ್ಪಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ.
ಉಪಚುನಾವಣೆ ಪ್ರಚಾರದ ವೇಳೆ ಮುನಿರತ್ನ ಅವರನ್ನು ನೂರಕ್ಕೆ ನೂರರಷ್ಟು ಮಂತ್ರಿಯನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದರು.‌ಆದರೆ ಅಂತಿಮ ಘಳಿಗೆಯಲ್ಲಿ ಅವರಿಗೆ ಸಚಿವ ಸ್ಣಾನ ಕೈತಪ್ಪಿದೆ.
ಇನ್ನು ಸಚಿವ ಸ್ಥಾನದ ಪ್ರಬಕ ಆಕಾಂಕ್ಷಿಯಾಗಿದ್ದ ಎಚ್.ವಿಶ್ವನಾಥ್ ಗೆ ಸಚಿವ ಸ್ಥಾನ ಸಿಕ್ಜಿಲ್ಲ. ಒಂದು ವೇಳೆ ಸಚಿವ ಸ್ಥಾನ ದೊರಕಿದ್ದರೆ ಮೈಸೂರು ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಂತಾಗುತ್ತಿತ್ತು.
ಬಿಜೆಪಿಯಲ್ಲಿ‌ ಹಿರಿಯ ಮುಖಂಡರಾದ ಉಮೇಶ್ ಕತ್ತಿ ಹಾಗೂ ನಿರಾಣಿ ಸಚಿವ ಸ್ಥಾನ ಸಿಗದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಈಗ ಇವರಿಬ್ಬರಿಗೂ ಸಚಿವ ಸ್ಥಾನ ನೀಡಿ ಬಿಕ್ಕಟ್ಟು ಶಮನಕ್ಕೆ ಯತ್ನಿಸಿದ್ದಾರೆ. ಅಲ್ಲದೆ ಉತ್ತರ ಕರ್ನಾಟಕಕ್ಕೂ ಪ್ರಾತಿನಿಧ್ಯ ನೀಡಿದ್ದಾರೆ ಸಿ.ಎಂ.
ಎಚ್.ವಿಶ್ವನಾಥ್, ಮುನಿರತ್ನ ಅವರನ್ನು ಹೊರತುಪಡಿಸಿ ಉಳಿದ ಎಲ್ಲ ವಲಸಿಗ ಶಾಸಕರಿಗೆ ಅವಕಾಶ ಕಲ್ಪಿಸಿ ಕೊಟ್ಟ ಮಾತಿನಂತೆ ಯಡಿಯೂರಪ್ನ ಡೆದುಕೊಂಡಿದ್ದಾರೆ.
ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನದಿಂದ ವಂಚಿತರಾಗಿರುವವರು ತೀವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ