ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಿಂದ ಹಿಂದೆ ಸರಿದ ಶ್ರೀಲಂಕಾ

ಕೊಲಂಬೊ, ಜು.21- ತೀವ್ರ ಆರ್ಥಿಕ ಬಿಕ್ಕಟ್ಡಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಈ ಬಾರಿಯ ಏಷ್ಯಾ ಕಪ್ ಕ್ರಿಕೆಟ್ ನಡೆಸಲು ಸಾಧ್ಯವಿಲ್ಲ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.
ಶ್ರೀಲಂಕಾ ಕ್ರಿಕೆಟ್ ತಮ್ಮ ದೇಶದಲ್ಲಿ ಅಸ್ತಿತ್ವದಲ್ಲಿರುವ ರಾಜಕೀಯ ಮತ್ತು ಆರ್ಥಿಕ ಪರಿಸ್ಥಿತಿಯಿಂದಾಗಿ ವಿಶೇಷವಾಗಿ ವಿದೇಶಿ ವಿನಿಮಯಕ್ಕೆ ಸಂಬಂಧಿಸಿದಂತೆ ಆರು ತಂಡಗಳ ಏಷ್ಯಾ ಕಪ್ ಆಯೋಜಿಸುವ ಪರಿಸ್ಥಿತಿ ಯಲ್ಲಿ ತಾನಿಲ್ಲ ಎಂದು ಹೇಳಿದೆ.
ಏಷ್ಯಾ ಕಪ್ ಟೂರ್ನಿ ಆಯೋಜನೆಯಿಂದ ಶ್ರೀಲಂಕಾ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ಬದಲಿ ವ್ಯವಸ್ಥೆ ವ್ಯವಸ್ಥೆ ನಡೆದಿಲ್ಲ. ಯುಎಇ ಅಥವಾ ಭಾರತದಲ್ಲಿ ಈ ಟೂರ್ನಿ ಆಯೋಜಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಯುಎಇ ಅಂತಿಮ ಬದಲಿ ಸ್ಥಳವಲ್ಲ, ಅದು ಬೇರೆ ಯಾವುದಾದರೂ ದೇಶವಾಗಿರಬಹುದು, ಭಾರತವೂ ಸಹ ಆಗಿರಬಹುದು. ಏಷ್ಯನ್ ಕ್ರಿಕೆಟ್ ಕೌನ್ಸಿಲ್, ಶ್ರೀಲಂಕಾ ಕ್ರಿಕೆಟ್ ಮಂಡಳಿ ಈ ಬಗ್ಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.
ಏಷ್ಯಾ ಕಪ್ ಟೂರ್ನಿ ಆಗಸ್ಟ್ 27ರಿಂದ ಸೆಪ್ಟೆಂಬರ್ 11ರ ವರೆಗೆ ನಡೆಯಲಿದೆ.